SHIVAMOGGA | MALENADUTODAY NEWS | ಮಲೆನಾಡು ಟುಡೆ | Feb 21, 2025
ಬಾಲಿವುಡ್ನ ಕಂಗನಾ ರಣಾವತ್ ನಟಿಸಿ ನಿರ್ದೇಶಿಸಿರುವ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಜೀವನಾಧರಿತ ಚಿತ್ರವಾದ ಎಮರ್ಜೆನ್ಸಿ ಚಿತ್ರ ಇದೇ ಮಾರ್ಚ್ 17 ರಂದು ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಕಂಗನಾ ರಣಾವತ್ ತಮ್ಮ ಇನ್ಸ್ಟಾಗ್ರಾಮ್ ಅಕೌಂಟ್ನಲ್ಲಿ ಸ್ಟೋರಿಯನ್ನ ಅಪ್ಲೋಡ್ ಮಾಡಿದ್ದಾರೆ.
ದೇಶದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿ ಜೀವನಾಧಾರಿತ ಚಿತ್ರವಾದ ಎಮರ್ಜೆನ್ಸಿ ಚಿತ್ರ ಜನವರಿ 17 ರಂದು ವಿಶ್ವದಾದ್ಯಂತ ಬಿಡುಗಡೆಯಾಗಿತ್ತು. ಈ ಚಿತ್ರದಲ್ಲಿ ಅಂದಿನ ಕಾಲದಲ್ಲಿ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿಯವರ ಕಾರ್ಯವೈಖರಿ, ಅವರ ಅಧಿಕಾರಾವಧಿಯಲ್ಲಿ ಸಂಭವಿಸಿದ ಪ್ರಮುಖ ಘಟನೆಗಳು, ಅವರ ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಅವರು ಎದುರಿಸಿದ ಸವಾಲುಗಳು ಮತ್ತು ಹೋರಾಟಗಳನ್ನು ಮುಖ್ಯವಾಗಿ ಚಿತ್ರೀಕರಿಸಲಾಗಿತ್ತು. ಈ ಚಿತ್ರ ವಿರೋಧಕ್ಕೂ ಕಾರಣವಾಗಿತ್ತು. ಮತ್ತೊಂದೆಡೆ ಪರ ವಿರೋಧ ಚರ್ಚೆಗೆ ಗುರಿಯಾಗಿತ್ತು.
60 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಈ ಚಿತ್ರ ಪ್ರೇಕ್ಷಕ ವಲಯದಲ್ಲಿ ಮಿಶ್ರ ಪ್ರತಿಕ್ರಿಯೆಯನ್ನು ಪಡೆಯಿತು. ಅಷ್ಟೇ ಅಲ್ಲದೆ ಬಾಕ್ಸ್ ಆಫಿಸ್ನಲ್ಲಿ ಯಶಸ್ಸು ಪಡೆಯುವಲ್ಲಿ ಮುಗ್ಗರಿಸಿತ್ತು. ಇದೀಗ ಈ ಚಿತ್ರ ಮಾರ್ಚ್ 17 ರಂದು ನೆಟ್ಫ್ಲಿಕ್ಸ್ನಲ್ಲಿ ಬಿಡುಗಡೆಯಾಗುತ್ತಿದ್ದು, ಈ ಚಿತ್ರ ಓಟಿಟಿಯಲ್ಲಿ ಕಮಾಲ್ ಮಾಡುತ್ತಾ ಎಂದು ಕಾದು ನೋಡಬೇಕಿದೆ.
SUMMARY | Emergency is slated to release on Netflix on March 17.
KEYWORDS | Emergency, Netflix, kangana ranaut,