Ott release : ಸೂಪರ್‌ಸ್ಟಾರ್ ರಜನಿಕಾಂತ್ ನಟನೆಯ ಬ್ಲಾಕ್‌ಬಸ್ಟರ್ ಸಿನಿಮಾ ‘ಕೂಲಿ’ ಇದೀಗ ಓಟಿಟಿ ಪ್ಲಾಟ್‌ಫಾರ್ಮ್‌ಗೆ ಕಾಲಿಡಲು ಸಿದ್ಧವಾಗಿದೆ. ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಯಶಸ್ಸು ಗಳಿಸಿದ ಈ ಸಿನಿಮಾ ಸೆಪ್ಟೆಂಬರ್ 11 ರಂದು ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಸ್ಟ್ರೀಮಿಂಗ್ ಆಗಲಿದೆ.
ಆಗಸ್ಟ್ 14ರಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾದ ‘ಕೂಲಿ’, ಬಾಕ್ಸ್ ಆಫೀಸ್‌ನಲ್ಲಿ 500 ಕೋಟಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ದಾಖಲೆ ಸೃಷ್ಟಿಸಿತ್ತು. ರಜನಿಕಾಂತ್ ಅವರ ಸ್ವಾಗ್, ನಾಗಾರ್ಜುನ ಅವರ ಸ್ಟೈಲ್, ಮತ್ತು ಉಪೇಂದ್ರ ಅವರ ಖದರ್ ಪ್ರೇಕ್ಷಕರನ್ನು ಥಿಯೇಟರ್‌ಗಳತ್ತ ಸೆಳೆದಿದ್ದವು. ಬಿಡುಗಡೆಯಾಗಿ ಕೇವಲ ಒಂದು ತಿಂಗಳೊಳಗೆ ಈ ಸಿನಿಮಾ ಈಗ ಓಟಿಟಿಯಲ್ಲಿ ಲಭ್ಯವಾಗುತ್ತಿದೆ.
ಈ ಕುರಿತು ಅಮೆಜಾನ್ ಪ್ರೈಮ್ ತನ್ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, “ದೇವಾ, ಸೈಮನ್, ಮತ್ತು ದಹಾ ಅವರ ಕಥೆಯೊಂದಿಗೆ ಸಂಭ್ರಮಿಸಲು ಸಿದ್ಧರಾಗಿ” ಎಂಬ ಶೀರ್ಷಿಕೆ ನೀಡಿದೆ.
Ott release : ಈ ದಿನ ಸು ಫ್ರಂ ಸೋ’ ಚಿತ್ರದ ಓಟಿಟಿ ರಿಲೀಸ್
ಇತ್ತೀಚೆಗೆ ಓಟಿಟಿಯಲ್ಲಿ ಬಿಡುಗಡೆಯಾಗಲಿದೆ ಎಂದು ಘೋಷಿಸಿದ್ದ ಮತ್ತೊಂದು ಸಿನಿಮಾ ‘ಸು ಫ್ರಂ ಸೋ‘ ದ ದಿನಾಂಕದಲ್ಲಿ ಬದಲಾವಣೆಯಾಗಿದೆ. ಈ ಹಿಂದೆ ಈ ಚಿತ್ರ ಸೆಪ್ಟೆಂಬರ್ 5 ರಂದು ರಿಲೀಸ್ ಆಗಲಿದೆ ಎಂದು ಹೇಳಲಾಗಿತ್ತು. ಆದರೆ, ಈಗ ಈ ದಿನಾಂಕ ಬದಲಾಗಿದ್ದು, ಚಿತ್ರ ಸೆಪ್ಟೆಂಬರ್ 9 ರಂದು ಜಿಯೋ ಹೋಸ್ಟರ್ ನಲ್ಲಿ ಬಿಡುಗಡೆಯಾಗಲಿದೆ.
