Shivamogga Vinoba Nagar ಶಿವಮೊಗ್ಗ : ನಗರದ ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯ ತರಕಾರಿ ಮಾರುಕಟ್ಟೆ ಬಳಿ ನಿನ್ನೆ ರಾತ್ರಿ ಅರುಣ್ ಎಂಬಾತನನ್ನು ಕೊಲೆ ಮಾಡಲಾಗಿದೆ. ರಾಡ್ ನಿಂದ ಹೊಡೆದು ಆತನನ್ನುಹತ್ಯೆ ಮಾಡಲಾಗಿದೆ. ಈ ಬಗ್ಗೆ ಎಸ್ಪಿ ಮಿಥುನ್ ಕುಮಾರ್ ಪ್ರಾಥಮಿಕ ಮಾಹಿತಿ ನೀಡಿದ್ದರು. ಅರುಣ್ (26) ಅಲಿಯಾಸ್ ಬೊಂಡಾ ಕೊಲೆಯಾದ ಯುವಕ. ಕೌಟುಂಬಿಕ ಕಲಹದ ಕಾರಣಕ್ಕೆ ಸಂಬಂಧಿಕರಿಂದಲೇ ಈ ಕೊಲೆ ನಡೆದಿದೆ ಎಂಬುದು ಗೊತ್ತಾಗಿದೆ. ಅಲ್ಲದೆ ಆರೋಪಿಗಳ ಪೈಕಿ ಇಬ್ಬರ ಸುಳಿವು ದೊರೆತಿದೆ. ಶೀಘ್ರ ಬಂಧಿಸಲಾಗುವುದು’ ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ಬಗ್ಗೆ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಎಸ್ಪಿ ಮಿಥುನ್ ಕುಮಾರ್ ಕೂಡ ಸ್ಥಳಕ್ಕೆ ರಾತ್ರಿ ವಿಸಿಟ್ ಮಾಡಿ ಪರಿಶೀಲನೆ ನಡೆಸಿದ್ದರು.

ವಿನೋನನಗರ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಘಟನೆಯ ಚಿತ್ರಗಳು ಇಲ್ಲಿದೆ
[su_image_carousel source=”media: 30421,30420,30419,30418,30417,30416,30415″ controls_style=”light”]
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
ಶಿವಮೊಗ್ಗದಲ್ಲಿ ಭೀಕರ ಕೊಲೆ: ಸಂಬಂಧಿಕರಿಂದಲೇ ಯುವಕನ ಹತ್ಯೆ Youth Murdered in Shivamogga Vinoba Nagar by Relatives over Family Dispute




