ಶಿಕ್ಷಣ ಸಚಿವರ ಕ್ಷೇತ್ರ ಸೊರಬದಲ್ಲಿಯೇ ಬಿಜೆಪಿಗೆ ನೂರಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರ ಸೇರ್ಪಡೆ ; ಕಮನವಳ್ಳಿಯಲ್ಲಿ ಪಕ್ಷಾಂತರ!

ಹಂಚಿಕೊಳ್ಳಿ
WhatsApp Facebook X Telegram
Over 100 Congress Workers Join BJP in Kamanavalli, Sorab
Over 100 Congress Workers Join BJP in Kamanavalli, Sorab

ಮಲೆನಾಡು ಟುಡೆ ಸುದ್ದಿ / ಸೊರಬ / ಸೊರಬ ವಿಧಾನಸಭಾ ಕ್ಷೇತ್ರದ ಕಮನವಳ್ಳಿ ಗ್ರಾಮದಲ್ಲಿ ನೂರಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಶಿಕ್ಷಣ ಸಚಿವ ಹಾಗೂ ಉಸ್ತುವಾರಿ ಸಚಿವ ಮಧು ಬಂಗಾರಪ್ಪರನವರ ಕ್ಷೇತ್ರದಲ್ಲಿಯೇ ಈ ಬೆಳವಣಿಗೆ ನಡೆದಿರುವುದು ಸಂಚಲನ ಮೂಡಿಸಿದೆ. ಈ ಬಗ್ಗೆ ಮಾತನಾಡಿರುವ ಸಂಸದ ಬಿ.ವೈ.ರಾಘವೇಂದ್ರ , ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತದ ಬಗ್ಗೆ ಅಸಮಾಧಾನಗೊಂಡು ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ತಿಳಿಸಿದ್ದಾರೆ. ಕಮನವಳ್ಳಿ ಗ್ರಾಮದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ ನೂರಕ್ಕೂ ಹೆಚ್ಚು ಕಾರ್ಯಕರ್ತರು ಬಿಜೆಪಿ ಸೇರಿದ್ದು, ಸ್ಥಳೀಯ ಮಟ್ಟದಲ್ಲಿ ಪಕ್ಷದ ಸಂಘಟನೆಗೆ ಮತ್ತಷ್ಟು ಬಲ ದೊರೆತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೇಂದ್ರ ಸರ್ಕಾರದ ಜನಪರ ಆಡಳಿತ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳು ಜನರ ವಿಶ್ವಾಸ ಗಳಿಸುತ್ತಿವೆ. ಮತ್ತೊಂದೆಡೆ ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತದ ವಿರುದ್ಧ ಸಾರ್ವಜನಿಕರಲ್ಲಿ ಅಸಮಾಧಾನ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಯತ್ತ ಮುಖ ಮಾಡುತ್ತಿದ್ದಾರೆ

ಸಂಸದ, ಬಿ.ವೈ. ರಾಘವೇಂದ್ರ

ಈ ಸಂದರ್ಭದಲ್ಲಿ ಸೊರಬ ಕ್ಷೇತ್ರದ ಪ್ರಭಾರಿಗಳಾದ ಆರ್.ಕೆ. ಸಿದ್ದರಾಮಣ್ಣ, ಮಾಜಿ ಸಚಿವರಾದ ಹರತಾಳು ಹಾಲಪ್ಪ ಮತ್ತು ಬಿ.ಸಿ. ಪಾಟೀಲ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಜಗದೀಶ್, ತಾಲೂಕು ಬಿಜೆಪಿ ಅಧ್ಯಕ್ಷ ಪ್ರಕಾಶ್, ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿ ಡಿ.ಎಸ್. ಅರುಣ್ ಉಪಸ್ಥಿತರಿದ್ದರು. ಇವರೊಂದಿಗೆ MADB ಮಾಜಿ ಅಧ್ಯಕ್ಷ ಪದ್ಮನಾಭ ಭಟ್, ನಿಗಮದ ಮಾಜಿ ಅಧ್ಯಕ್ಷ ರಾಜು ತಲ್ಲೂರು, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ವೀರೇಶ್ ಸೇರಿದಂತೆ ಬಿಜೆಪಿಯ ವಿವಿಧ ಮುಖಂಡರು ಹಾಗೂ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor