ಬಿಎಸ್‌ವೈ ಆಸ್ತಿ ವಿರುದ್ಧ ತನಿಖೆಗೆ ಆಗ್ರಹಿಸಿ ಶಿಕಾರಿಪುರದಿಂದ ಪಾದಯಾತ್ರೆ | ರಾಘವೇಂದ್ರ ನಾಯ್ಕ್
Padayatra from Shikaripura demanding probe against BSY's assets | Raghavendra Naik

SHIVAMOGGA | MALENADUTODAY NEWS | Aug 1, 2024
ರಾಜ್ಯದಲ್ಲೀಗ ಪಾದಯಾತ್ರೆ ರಾಜಕಾರಣ ಆರಂಭವಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಶಿವಮೊಗ್ಗದಲ್ಲಿ ಮಾಜಿ ಸಿಎಂ ಬಿಎಸ್‌ವೈ ರವರ ಆಸ್ತಿಯ ಬಗ್ಗೆ ತನಿಖೆ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪಾದಯಾತ್ರೆ ನಡೆಸಲಾಗುವುದು ಎಂದು ಶಿಕಾರಿಪುರದ ಕಾಂಗ್ರೆಸ್ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ರಾಘವೆಂದ್ರ ನಾಯ್ಕ ಹೇಳಿದ್ಧಾರೆ
ಮಣಿಪಾಲ್‌ಗೆ ಹೋಗುತ್ತಿದ್ದ ಕಾರು ಮೇಗರವಳ್ಳಿ ಬಳಿ ಪಲ್ಟಿ | ತಲೆಕೆಳಗಾಗಿ ನಿಂತ ವಾಹನ
ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರ ಅಕ್ರಮ ಆಸ್ತಿ ಗಳಿಕೆ ವಿರುದ್ಧ ತನಿಖೆ ನಡೆಸಬೇಕು ಎಂದು ಒತ್ತಾಯಿಸಿರುವ ಅವರು ಈ ಸಂಬಂಧ ಅಹಿಂದ ಸಮಾಜದ ನೇತೃತ್ವದಲ್ಲಿ ಶಿಕಾರಿಪುರದಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಲಾಗುವುದು ಎಂದಿದ್ದಾರೆ.
ಆಗಸ್ಟ್‌ನಲ್ಲಿ ನಾವು ಪಾದಯಾತ್ರೆ ನಡೆಸುತ್ತೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕಪ್ಪುಚುಕ್ಕೆ ಇಲ್ಲದ ಆಡಳಿತ ನಡೆಸುತ್ತಿದ್ದಾರೆ. ಆದರೆ ಮುಡಾ ಹಗರಣದಲ್ಲಿ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಪಾದಯಾತ್ರೆ ನಡೆಸಲು ಮುಂದಾಗಿರುವುದು ಖಂಡನೀಯ ಎಂದಿದ್ಧಾರೆ.
ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ