DISTRICT

ಕಾರಿನಲ್ಲಿ ಚಿಪ್ಪು ಹಂದಿಯ ಚಿಪ್ಪು ಮಾರಾಟಕ್ಕೆ ಯತ್ನ: ಮೂವರು ಆರೋಪಿಗಳ ಬಂಧನ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Pangolin Scales Smuggling ಮಂಗಳೂರು : ಅಕ್ರಮವಾಗಿ ಚಿಪ್ಪು ಹಂದಿಯ ಚಿಪ್ಪುಗಳನ್ನು ಶೇಖರಿಸಿಟ್ಟು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಜಾಲವೊಂದನ್ನು ಮಂಗಳೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ಭೇದಿಸಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣಶಿವಮೊಗ್ಗ ಏರ್​ಪೋರ್ಟ್​ ವಿಶ್ವೇಶ್ವರ್​ ಭಟ್​ Facebook post ,ಷೇರ್ ಮಾಡಿ ರಿಪ್ಲೆ ನೀಡಿದ ಸಂಸದ 

ಮೇ 05ರಂದು ಮಂಗಳೂರಿನ ಕದ್ರಿ ಉದ್ಯಾನವನದ ಸಮೀಪ ಮಾರುತಿ ಸ್ವಿಫ್ಟ್ ಕಾರೊಂದರಲ್ಲಿ ಚಿಪ್ಪು ಹಂದಿಯ ಚಿಪ್ಪುಗಳನ್ನು ಇಟ್ಟುಕೊಂಡು ಮಾರಾಟ ಮಾಡಲು ಮೂವರು ಯತ್ನಿಸುತ್ತಿದ್ದರು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ದಾಳಿ ಮಾಡುವ ಮೂಲಕ ಮೂವರನ್ನೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ಬೆಂಗಳೂರು ದಕ್ಷಿಣದ ಹೆಚ್.ಆರ್. ಜಗದೀಶ, ಕನಕಪುರದ ಸಿದ್ದುನಾಯ್ಕ ಹಾಗೂ ಬೆಂಗಳೂರಿನ ಬನಶಂಕರಿ 2ನೇ ಹಂತದ ನಿವಾಸಿ ಬಾಬು ಟಿಪ್ಪು ಸಾಬ್ ಎಂದು ಗುರುತಿಸಲಾಗಿದೆ. ಈ ಮೂವರು ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ಕಾರಿನಲ್ಲಿ ಬಚ್ಚಿಟ್ಟಿದ್ದ 5.200 ಕಿಲೋಗ್ರಾಂ ತೂಕದ ಚಿಪ್ಪು ಹಂದಿಯ ಚಿಪ್ಪುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕೃತ್ಯಕ್ಕೆ ಬಳಸಿದ್ದ ಸ್ವಿಫ್ಟ್ ಕಾರನ್ನು ಕೂಡ ಜಪ್ತಿ ಮಾಡಲಾಗಿದೆ. ಆರೋಪಿಗಳ ವಿರುದ್ಧ ಅರಣ್ಯ ಕಾಯ್ದೆ ಹಾಗೂ ವನ್ಯಜೀವಿಗಳ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬೆಂಗಳೂರು ಸಿ.ಐ.ಡಿ. ಅರಣ್ಯ ಘಟಕದ ಪೊಲೀಸ್ ಮಹಾನಿರೀಕ್ಷಕರು ಹಾಗೂ ಮಡಿಕೇರಿ ಸಿ.ಐ.ಡಿ. ಅರಣ್ಯ ಘಟಕದ ಪೊಲೀಸ್ ಅಧೀಕ್ಷಕರಾದ ಪವನ್ ನೆಜ್ಜೂರು ಅವರ ನೇರ ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದೆ. ಮಂಗಳೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್ ಉಪನಿರೀಕ್ಷಕ ದಿಲೀಪ್ ಜಿ.ಆರ್. ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ತಾರನಾಥ ಎಸ್. ಮತ್ತು ಅಬ್ದುಲ್ ರವೂಫ್ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. 

Pangolin Scales Smuggling ವನ್ಯಜೀವಿಗಳ ಸಂರಕ್ಷಣೆಗೆ ಸಂಬಂಧಪಟ್ಟಂತೆ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ಸಾರ್ವಜನಿಕರು ಮಡಿಕೇರಿ ಸಿಐಡಿ ಅರಣ್ಯ ಘಟಕ ಪೊಲೀಸ್ ಅಧೀಕ್ಷಕರ ಕಚೇರಿಯ ದೂರವಾಣಿ ಸಂಖ್ಯೆ 9480800220 ಅಥವಾ ಸಾಗರ ಕಚೇರಿಯ ದೂರವಾಣಿ ಸಂಖ್ಯೆ 9480803394 ಅನ್ನು ಸಂಪರ್ಕಿಸಿ ಮಾಹಿತಿ ನೀಡಬೇಕು ಎಂದು ಸಾಗರ ಸಿ.ಐ.ಡಿ. ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

Pangolin Scales Smuggling 3 Held in Mangaluru

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.