ಭದ್ರಾವತಿ : ಮೇಕೆ ಕದ್ದ ಪ್ರಕರಣ ಭೇದಿಸಿದ ಪೊಲೀಸರು! ಆರೋಪಿ ಅರೆಸ್ಟ್​

ಹಂಚಿಕೊಳ್ಳಿ
WhatsApp Facebook X Telegram
Paper Town Police

Paper Town Police / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಬಾರಂದೂರು ಗ್ರಾಮದಲ್ಲಿ ನಡೆದಿದ್ದ ಮೇಕೆಗಳ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಾರಂದೂರು ನಿವಾಸಿಯಾಗಿರುವ ಮನಿಯ ಎಂಬುವರಿಗೆ ಸೇರಿದ ಒಟ್ಟು ಆರು ಮೇಕೆಗಳನ್ನು ದುಷ್ಕರ್ಮಿಗಳು ಕಳವು ಮಾಡಿದ್ದರು. ಅಂದಾಜು ಮೌಲ್ಯ 90 ಸಾವಿರ ರೂಪಾಯಿ ಮೌಲ್ಯದ ಮೇಕೆ ಕಳ್ಳತನ ಪ್ರಕರಣ ಸಂಬಂಧ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಪ್ರಕರಣದ ಬೆನ್ನತ್ತಿದ ಪೇಪರ್ ಟೌನ್ ಪೊಲೀಸ್ ಠಾಣೆಯ ಎಸ್‌ಐ ಕುಮಾರ್ ಎನ್‌ಪಿ ರವರ ಮಾರ್ಗದರ್ಶನದಲ್ಲಿ ವಿಶೇಷ ತಂಡವೊಂದನ್ನು ರಚಿಸಲಾಗಿತ್ತು. ಈ ಕಾರ್ಯಾಚರಣೆ ತಂಡದಲ್ಲಿ ಎಎಸ್‌ಐ ಕುಮಾರ್ ಹಾಗೂ ಕ್ರೈಮ್ ವಿಭಾಗದ ಸಿಬ್ಬಂದಿಗಳಾದ ನಾಗರಾಜ್, ಬಸವರಾಜ್ ಮತ್ತು ಭರತ್ ಅವರು ಪಾಲ್ಗೊಂಡಿದ್ದರು. ತನಿಖೆಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಈ ತಂಡ ಮೇಕೆಗಳನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸಫಲವಾಗಿದೆ.

ಬಂಧಿತನಿಂದ ಸುಮಾರು 70 ಸಾವಿರ ರೂಪಾಯಿ ಮೌಲ್ಯದ ಒಟ್ಟು 5 ಮೇಕೆಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತ್ವರಿತಗತಿಯಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿರುವ ಪೊಲೀಸ್ ಸಿಬ್ಬಂದಿಯು ಮುಂದಿನ ಕಾನೂನು ಪ್ರಕ್ರಿಯೆಗಳನ್ನು ಕೈಗೊಂಡಿದ್ದಾರೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor