ಭದ್ರಾವತಿ | ಜಮೀನಿನಲ್ಲಿ ಟ್ರಾನ್ಸಫಾರ್ಮರ್ ಅಳವಡಿಸುವ ವೇಳೆ ಕಿರಿಕ್ | ಸ್ಥಳದಲ್ಲಿಯೇ ಕೊಲೆ
person murder, Bhadravati taluk ,Shimoga district, Bhadravati Rural Police Station

SHIVAMOGGA | MALENADUTODAY NEWS | ಮಲೆನಾಡು ಟುಡೆ Jan 23, 2025
ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕುನಲ್ಲಿ ನಿನ್ನೆ ದಿನ ವ್ಯಕ್ತಿಯೊಬ್ಬನ ಕೊಲೆ ಮಾಡಲಾಗಿದೆ. ಇಲ್ಲಿನ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮೃತರನ್ನು ಶಾಂತಕುಮಾರ್ ಅಂದಾಜು 35 ವರ್ಷ ಎಂದು ಗುರುತಿಸಲಾಗಿದೆ. ಭದ್ರಾವತಿ ತಾಲ್ಲೂಕು ದೊಡ್ಡೇರಿ ಗ್ರಾಮದವರು. ವಿದ್ಯುತ್ ಟ್ರಾನ್ಸಫಾರ್ಮರ್‌ನ್ನು ತಮ್ಮ ಜಮೀನಿನಲ್ಲಿ ಅಳವಡಿಸುವ ವಿಚಾರವಾಗಿ ಲೇಪಾಕ್ಷಿ ಎಂಬವರ ಜೊತೆಗೆ ಜಗಳವಾಗಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಜಗಳದ ನಡುವೆ ಶಾಂತಕುಮಾರ್ ರವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ. ಪರಿಣಾಮ ಅವರು ಸಾವನ್ನಪ್ಪಿದ್ದಾರೆ.
ವಿಚಾರ ತಿಳಿಯುತ್ತಲೇ ಸ್ಥಳಕ್ಕೆ ಎಸ್‌ಪಿ ಮಿಥುನ್ ಕುಮಾರ್ ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ. ಇನ್ನೂ ಪೊಲೀಸರು ಲೇಪಾಕ್ಷಿ ಹಾಗೂ ಇನ್ನೊಬ್ಬರನ್ನ ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸ್ತಿದ್ದಾರೆ.
SUMMARY | person murdered in Bhadravati taluk of Shimoga district yesterday. Bhadravati Rural Police Station here.
KEY WORDS | person murder, Bhadravati taluk ,Shimoga district, Bhadravati Rural Police Station