PERSONAL LOAN / ಸರ್ಕಾರದ ಅಭಿವೃದ್ದಿ ನಿಗಮದಿಂದ ವೈಯಕ್ತಿಕ ಸಾಲಕ್ಕೆ ಅರ್ಜಿ ಆಹ್ವಾನ/ ಡಿಟೇಲ್ಸ್​ ಓದಿ

ಸ್ವಯಂ ಉದ್ಯೋಗಕ್ಕಾಗಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಟ ರೂ.2 ಲಕ್ಷಗಳವರೆಗೆ ಆರ್ಥಿಕ ನೆರವು ಇದರಲ್ಲಿ ಗರಿಷ್ಟ ಶೇ.15 ರಷ್ಟು ಸಹಾಯಧನ ಉಳಿಕೆ ಮೊತ್ತ ವಾರ್ಷಿಕ ಶೇ.4 ರ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡಲಾಗುವುದು.

PERSONAL LOAN / ಸರ್ಕಾರದ ಅಭಿವೃದ್ದಿ ನಿಗಮದಿಂದ ವೈಯಕ್ತಿಕ ಸಾಲಕ್ಕೆ ಅರ್ಜಿ ಆಹ್ವಾನ/ ಡಿಟೇಲ್ಸ್​ ಓದಿ
ಟುಡೇ ಮಾಹಿತಿ

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ 2022-23 ನೇ ಸಾಲಿಗೆ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಮತ್ತು ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಸೌಲಭ್ಯ ನೀಡಲು ಅರ್ಹ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಗರಿಷ್ಟ 2 ಲಕ್ಷ ರೂಪಾಯಿ ಸಾಲ

ಸ್ವಯಂ ಉದ್ಯೋಗಕ್ಕಾಗಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಟ ರೂ.2 ಲಕ್ಷಗಳವರೆಗೆ ಆರ್ಥಿಕ ನೆರವು ಇದರಲ್ಲಿ ಗರಿಷ್ಟ ಶೇ.15 ರಷ್ಟು ಸಹಾಯಧನ ಉಳಿಕೆ ಮೊತ್ತ ವಾರ್ಷಿಕ ಶೇ.4 ರ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡಲಾಗುವುದು.

BREAKING NEWS / ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಕೆಲ ಮಕ್ಕಳ ಆರೋಗ್ಯ ದಲ್ಲಿ ಏರುಪೇರು/ ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ/ BEO ಹೇಳಿದ್ದೇನು?

ಷರತ್ತುಗಳೇನು? 

ಈ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ ಮತು 3ಬಿಗೆ ಸೇರಿದವರಾಗಿರಬೇಕು(ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತ ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ) ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/-, ಪಟ್ಟಣ ಪ್ರದೇಶದವರಿಗೆ ರೂ.1,20,000/- ಗಳ ಒಳಗಿರಬೇಕು. 18 ರಿಂದ 55 ವಯೋಮಿತಿಯೊಳಗಿನವರು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಇದನ್ನು ಸಹ ಓದಿ ಶಿವಮೊಗ್ಗ ಕೋಮುಗಲಭೆಯ ಹಿಂದಿರೋ ತಂಡದ ಹೆಡೆಮುರಿ ಕಟ್ಟಿದ ಎಸ್​ಪಿಮಿಥುನ್​ ಕುಮಾರ್! ಏನಿದು ಕೇಸ್​? JP ಸ್ಟೋರಿ

ಯಾರು ಅರ್ಜಿ ಸಲ್ಲಿಸಬೇಕು? ವರಮಾನ ಎಷ್ಟಿರಬೇಕು

ಗಂಗಾ ಕಲ್ಯಾಣ ನೀರಾವರಿ ಯೋಜನೆಯ ಸೌಲಭ್ಯ ಪಡೆಯಲು ನಿಗಮದ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಖುಷ್ಕಿ ಜಮೀನು ಹೊಂದಿರುವ ಸಣ್ಣ ಮತ್ತು ಅತಿ ಸಣ್ಣ ರೈತರು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

  • ಕುಟುಂಬದ ವಾರ್ಷಿಕ ವರಮಾನ ರೂ.98,000/-, ಪಟ್ಟಣ ಪ್ರದೇಶದವರಿಗೆ ರೂ.1,20,000/- ಗಳ ಒಳಗಿದ್ದು ವಯೋಮಿತಿ 18 ರಿಂದ 60 ವರ್ಷದೊಳಗಿರಬೇಕು.
  • ಒಂದೇ ಸ್ಥಳದಲ್ಲಿ ಹೊಂದಿಕೊಂಡಿರುವಂತೆ ಕನಿಷ್ಟ 01 ಎಕರೆ ಜಮೀನು ಇದ್ದು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು.
  • ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಜನವರಿ 17 ರೊಳಗೆ ಅರ್ಜಿ ಸಲ್ಲಿಸಬೇಕು.

ಈಶ್ವರಪ್ಪರಿಗೆ ಸಂಕಷ್ಟ? : ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪರಿಗೆ ಮತ್ತೆ ಸಂಕಷ್ಟ ಎದುರಾಗುತ್ತಾ? ಸಾಕ್ಷ್ಯ ಮಂಡಿಸಲು ಹೇಳಿದ ಕೋರ್ಟ್​?

ಹೆಚ್ಚಿನ ಮಾಹಿತಿಗೆ ನಿಗಮದ ವೆಬ್‍ಸೈಟ್ www.dbcdc.karnataka.gov.in, ಸಹಾಯವಾಣಿ ಸಂಖ್ಯೆ: 080-22374832, 805077000476, 7090400100 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ಭಾಗ್ಯ ನಿಲಯ, ಭಂಡಾರಿ ಗ್ಯಾಸ್ ಏಜೆನ್ಸಿ ಹತ್ತಿರ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ, ದೂ.ಸಂ: 08182-229634 ನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com