PhD Fellowship for OBC Students in Karnataka
ಶಿವಮೊಗ್ಗ | ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ ಕರ್ನಾಟಕದ ವಿವಿಧ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ ಅಥವಾ ಅದರ ಅಧೀನ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಹೆಚ್.ಡಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ. ಫೆಬ್ರವರಿ 10, 2025 ರ ನಂತರ ಸಂಶೋಧನೆಯನ್ನು ಆರಂಭಿಸಿರುವ ಅರ್ಹ ವಿದ್ಯಾರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ ಅಥವಾ ಫೆಲೋಶಿಪ್ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಯೋಜನೆಯು ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗೆ ಸೇರಿದ ಹೊಸ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗಲಿದೆ.
ಶಿವಮೊಗ್ಗ: ಕಾಂಗ್ರೆಸ್ ಸರ್ಕಾರದ ವಿರುದ್ಧ ಜಿಲ್ಲಾ ಬಿಜೆಪಿ ಪ್ರತಿಭಟನೆ, ಕಾರಣವೇನು
ಅರ್ಜಿಯನ್ನು ಸಲ್ಲಿಸಲು ಇಚ್ಛಿಸುವ ಆಸಕ್ತ ಅಭ್ಯರ್ಥಿಗಳು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ನಿಗದಿತ ನಮೂನೆಯನ್ನು ಪಡೆದುಕೊಳ್ಳಬಹುದಾಗಿದೆ. ಭರ್ತಿ ಮಾಡಿದ ಅರ್ಜಿಯ ಜೊತೆಗೆ ಅಗತ್ಯವಿರುವ ಎಲ್ಲಾ ದೃಢೀಕೃತ ದಾಖಲಾತಿಗಳನ್ನು ಲಗತ್ತಿಸಿ, ದಿನಾಂಕ 09/12/2026ರ ಒಳಗಾಗಿ ಅದೇ ಕಚೇರಿಗೆ ಸಲ್ಲಿಸಬೇಕೆಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ತಮ್ಮ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಈ ವ್ಯಾಸಂಗ ವೇತನಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಬೇಕಿದ್ದಲ್ಲಿ ವಿದ್ಯಾರ್ಥಿಗಳು ಸಹಾಯವಾಣಿ ಸಂಖ್ಯೆ 8050770004 ಅಥವಾ ಇಲಾಖೆಯ ಅಧಿಕೃತ ವೆಬ್‌ಸೈಟ್ https://bcwd.karnataka.gov.in ಗೆ ಭೇಟಿ ನೀಡಬಹುದು. ಹೆಚ್ಚಿನ ಸಮಾಲೋಚನೆಗಾಗಿ ಜಿಲ್ಲಾ ಕಚೇರಿಯನ್ನು ಖುದ್ದಾಗಿ ಭೇಟಿ ಮಾಡಬಹುದು ಅಥವಾ ದೂರವಾಣಿ ಸಂಖ್ಯೆ 08182-222129 ಮೂಲಕ ಸಂಪರ್ಕಿಸಿ ತಮ್ಮ ಸಂದೇಹಗಳನ್ನು ಪರಿಹರಿಸಿಕೊಳ್ಳಬಹುದು ಎಂದು ತಿಳಿಸಲಾಗಿದೆ.

PhD Fellowship for OBC Students in Karnataka