ಪ್ರಧಾನಿ ನರೇಂದ್ರ ಮೋದಿ ಫೋಟೋ ಬಳಕೆ | ಶಿವಮೊಗ್ಗ ಕೋರ್ಟ್‌ನಲ್ಲಿ ಏನಾಯ್ತು ಕೇಸ್

Photo usage of Prime Minister Narendra Modi | What happened in Shimoga court case. Shimoga Court News, Shimoga Court Number, Shimoga News Today

ಪ್ರಧಾನಿ ನರೇಂದ್ರ ಮೋದಿ ಫೋಟೋ ಬಳಕೆ | ಶಿವಮೊಗ್ಗ ಕೋರ್ಟ್‌ನಲ್ಲಿ ಏನಾಯ್ತು ಕೇಸ್
Prime Minister Narendra Modi , Shimoga court case, Shimoga Court News, Shimoga Court Number, Shimoga News Today

SHIVAMOGGA | MALENADUTODAY NEWS | May 4, 2024    ‌ 

ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಬಳಕೆಗೆ ನಿರ್ಬಂಧ ವಿಧಿಸುವಂತೆ ಕೆ.ಎಸ್‌.ಈಶ್ವರಪ್ಪ ವಿರುದ್ಧ ಬಿಜೆಪಿ ಸಲ್ಲಿಸಿರುವ ಕೇಸ್‌ನ  ವಿಚಾರಣೆಯನ್ನು ಶಿವಮೊಗ್ಗ ಪ್ರಧಾನ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮೇ 27ಕ್ಕೆ ಮುಂದೂಡಿದೆ. ಬಿಜೆಪಿಯ ಅಧಿಕೃತ ಅಭ್ಯರ್ಥಿಗೆ ಮಾತ್ರ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಬಳಸಲು ಅವಕಾಶವಿದೆ. ಬೇರೆಯವರು ಬಳಕೆ ಮಾಡಿದರೆ ಅದು ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್– 29ರ ಉಲ್ಲಂಘನೆಯಾಗುತ್ತದೆ. ಹೀಗಾಗಿ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಶಿವಮೊಗ್ಗ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಬಳಕೆ ಮಾಡುವುದನ್ನು ನಿರ್ಬಂಧಿಸುವಂತೆ ಬಿಜೆಪಿ ಕೇಸ್‌ ಹಾಕಿತ್ತು. ಈ ಅರ್ಜಿಯನ್ನು ವಜಾಗೊಳಿಸುವಂತೆ  ಈಶ್ವರಪ್ಪ ಪರ ವಕೀಲ ಅಶೋಕಭಟ್‌ ಅರ್ಜಿ ಸಲ್ಲಿಸಿದ್ದರು. ಸದ್ಯ ಕೋರ್ಟ್‌ ವಿಚಾರಣೆಯನ್ನು ಮೇ  27 ಕ್ಕೆ ಮುಂದೂಡಿದೆ.