THIRTHAHALLI

ಮಾಳೂರು ಶಾಲೆಯ ದೈಹಿಕ ಶಿಕ್ಷಕಿ ಸುಮಾವತಿ ಡಿ.ಬಿ. ನಿವೃತ್ತಿ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ತೀರ್ಥಹಳ್ಳಿ: ತಾಲೂಕಿನ ಮಾಳೂರಿನ ಕುವೆಂಪು ಶತಮಾನೋತ್ಸವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಸುಮಾವತಿ ಡಿ.ಬಿ. ಅವರು ಏಪ್ರಿಲ್ 30 ರಂದು ವಯೋನಿವೃತ್ತಿ ಹೊಂದಲಿದ್ದಾರೆ. ಸುಮಾರು ಮೂರು ದಶಕಗಳ ಕಾಲ ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ ಅವರು ವಿದ್ಯಾರ್ಥಿ ಮತ್ತು ಪೋಷಕ ವಲಯದಲ್ಲಿ ಅಚ್ಚುಮೆಚ್ಚಿನ ಶಿಕ್ಷಕಿಯಾಗಿದ್ದಾರೆ. 

ಲಾಭಾಂಶದ ಆಸೆಗೆ ಬರೋಬ್ಬರಿ 53 ಲಕ್ಷ ಕಳೆದುಕೊಂಡ ಶಿವಮೊಗ್ಗ ವ್ಯಕ್ತಿ, ನಡೆದಿದ್ದೇನು

ಶಿಕ್ಷಣ ಮತ್ತು ವೃತ್ತಿ ಬದುಕು 

ಕೋಣಂದೂರು ಸಮೀಪದ ದಾವಣೀಬೈಲಿನಲ್ಲಿ ಜನಿಸಿದ ಸುಮಾವತಿ ಅವರು, ಮಲ್ಲಾಡಿಹಳ್ಳಿಯ ಅನಾಥ ಸೇವಾಶ್ರಮದಲ್ಲಿ ಶಿಕ್ಷಕ ತರಬೇತಿ ಪೂರ್ಣಗೊಳಿಸಿದ್ದರು. 1998ರಲ್ಲಿ ತೂದೂರು ಶಾಲೆಯಲ್ಲಿ ವೃತ್ತಿ ಬದುಕು ಆರಂಭಿಸಿದ ಇವರು, ಶಿಕಾರಿಪುರದ ಕಣಸೋಗಿ ಹಾಗೂ ಕೋಣಂದೂರಿನ ಕೆಪಿಎಸ್ ಶಾಲೆಯಲ್ಲಿ ಸೇವೆ ಸಲ್ಲಿಸಿ, ಕಳೆದ 2021 ರಿಂದ ಮಾಳೂರಿನ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 

ಅತ್ಯುತ್ತಮ ಖೋ ಖೋ ಕ್ರೀಡಾಪಟುವಾಗಿದ್ದ ಇವರು, ಮಕ್ಕಳ ದೈಹಿಕ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದರು. ಶಾಲಾ ಮಕ್ಕಳನ್ನು ತಮ್ಮ ಸ್ವಂತ ಮಕ್ಕಳಂತೆ ಪ್ರೀತಿಸುತ್ತಾ, ಕ್ರೀಡಾ ಕ್ಷೇತ್ರದಲ್ಲಿ ಅವರನ್ನು ಪ್ರೋತ್ಸಾಹಿಸುತ್ತಿದ್ದರು. ಇವರ ಸೇವೆಯನ್ನು ಗುರುತಿಸಿ ಮಂಡಗದ್ದೆ ಹೋಬಳಿ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಹಾಗೂ ನೇವಾದಳ ಉತ್ತಮ ನಾಯಕಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 

ಪ್ರಸ್ತುತ ಪತಿ ಮಂಜುನಾಥ ಹೆಗ್ಡೆ ಹಾಗೂ ಪುತ್ರಿಯರೊಂದಿಗೆ ಮಕ್ಸಿಮನೆಯಲ್ಲಿ ಸುಖಿ ಜೀವನ ನಡೆಸುತ್ತಿರುವ ಸುಮಾವತಿ ಅವರಿಗೆ, ಅವರ ನಿವೃತ್ತ ಜೀವನ ನೆಮ್ಮದಿಯಿಂದ ಕೂಡಿರಲಿ ಎಂದು ವಿದ್ಯಾರ್ಥಿಗಳು, ಸಹೋದ್ಯೋಗಿಗಳು ಹಾಗೂ ಮಾಳೂರಿನ ಗ್ರಾಮಸ್ಥರು ತುಂಬು ಹೃದಯದ ಶುಭ ಹಾರೈಕೆಗಳನ್ನು ತಿಳಿಸಿದ್ದಾರೆ.

Physical Education Teacher Sumavathi DB Retires

Physical Education Teacher Sumavathi DB Retires
Physical Education Teacher Sumavathi DB Retires

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.