Shivamogga | ಜಿಲ್ಲೆಯಲ್ಲಿ 2025-26ನೇ ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಇದರ ಲಾಭವನ್ನು ನೇರವಾಗಿ ರೈತರು ಪಡೆದುಕೊಳ್ಳಬಹುದಾಗಿದೆ. ಅಲ್ಲದೆ ಶೇಕಡಾ 90 ರಷ್ಟು ಸಹಾಯ ಧನವನ್ನು ಈ ಯೊಜನೆಯಲ್ಲಿರೈತರು ಪಡೆಯಬಹಯದಾಗಿದೆ. ಇದರ ಅಡಿಯಲ್ಲಿ ತೋಟಗಳಲ್ಲಿ ಸೂಕ್ಷ್ಮ ನೀರಾವರಿ ಘಟಕಗಳನ್ನು ಅಳವಡಿಸಲು ಇಲಾಖೆಯು ನೆರವಾಗುತ್ತಿದೆ.
ಈ ಯೋಜನೆಯ ಸೌಲಭ್ಯ ಪಡೆಯಲು ಇಚ್ಛಿಸುವ ರೈತರಿಗೆ ಅವರ ಹಿಡುವಳಿಯ ಆಧಾರದ ಮೇಲೆ ಸಹಾಯಧನವನ್ನು ನಿಗದಿಪಡಿಸಲಾಗಿದೆ.
ಐದು ಎಕರೆವರೆಗಿನ ಜಮೀನಿನಲ್ಲಿ ಸೂಕ್ಷ್ಮ ನೀರಾವರಿ ಪದ್ಧತಿಯನ್ನು ಅಳವಡಿಸಿಕೊಳ್ಳುವ ರೈತರಿಗೆ ವೆಚ್ಚದ ಶೇಕಡಾ 90 ರಷ್ಟು ಹಣವನ್ನು ಸಹಾಯಧನವನ್ನಾಗಿ ಸರ್ಕಾರ ಭರಿಸಲಿದೆ.
ಐದು ಎಕರೆಗಿಂತ ಹೆಚ್ಚಿನ ವಿಸ್ತೀರ್ಣದ ಪ್ರದೇಶವನ್ನು ಹೊಂದಿರುವ ರೈತರಿಗೆ ಶೇಕಡಾ 45 ರಷ್ಟು ಸಹಾಯಧನ ಲಭ್ಯವಿರಲಿದೆ. ಒಬ್ಬ ಫಲಾನುಭವಿಯು ಗರಿಷ್ಠ 12.50 ಎಕರೆ ಪ್ರದೇಶಕ್ಕೆ ಮಾತ್ರ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಹಿಂದೆ ಈ ಯೋಜನೆಯ ಲಾಭ ಪಡೆದವರಿಗೂ ಮತ್ತೊಮ್ಮೆ ಅವಕಾಶ ನೀಡಲಾಗಿದ್ದು, 7 ವರ್ಷಗಳ ಹಿಂದೆ ಸೂಕ್ಷ್ಮ ನೀರಾವರಿ ಪದ್ಧತಿ ಅಳವಡಿಸಿಕೊಂಡು ಸಹಾಯಧನ ಪಡೆದಿದ್ದ ರೈತರ ಉಪಕರಣಗಳು ಹಾನಿಯಾಗಿದ್ದಲ್ಲಿ ಅಂತಹವರು ಈಗ ಮತ್ತೆ ಅರ್ಜಿ ಸಲ್ಲಿಸಬಹುದಾಗಿದೆ.

ಹಳೆಯದಾದ ಉಪಕರಣಗಳ ಬದಲಿಗೆ ಹೊಸದನ್ನು ಅಳವಡಿಸಿಕೊಳ್ಳಲು ಅವರು ಕೂಡ ಸಹಾಯಧನಕ್ಕೆ ಅರ್ಹರಾಗಿರುತ್ತಾರೆ. ಸರ್ಕಾರದ ಮಾರ್ಗಸೂಚಿಗಳು, ಅನುದಾನದ ಲಭ್ಯತೆ ಮತ್ತು ಹಿರಿತನದ ಪಟ್ಟಿಯ ಆಧಾರದ ಮೇಲೆ ಫಲಾನುಭವಿಗಳನ್ನು ಆಯ್ಕೆ ಮಾಡಿ ಸಹಾಯಧನ ವಿತರಿಸಲಾಗುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಸಾಮಾನ್ಯ ವರ್ಗಕ್ಕೆ ಸೇರಿದ ಎಲ್ಲಾ ಆಸಕ್ತ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ಪ್ರಕಟಣೆ ತಿಳಿಸಿದೆ.
ಶಿವಮೊಗ್ಗ: ಸೋಗಾನೆಯಲ್ಲಿ ನಿರ್ಮಾಣವಾಗಲಿರುವ ಹೈ-ಸೆಕ್ಯೂರಿಟಿ ಜೈಲಿನ ಸ್ಥಳಕ್ಕೆ ಡಿಸಿ ಮತ್ತು ಎಸ್ಪಿ ಭೇಟಿ
ಈ ಕುರಿತು ಹೆಚ್ಚಿನ ಮಾಹಿತಿ ಪಡೆಯಲು ಅಥವಾ ಅರ್ಜಿ ಸಲ್ಲಿಸಲು ರೈತರು ತಮ್ಮ ವ್ಯಾಪ್ತಿಯ ಹೋಬಳಿ ಅಥವಾ ತಾಲ್ಲೂಕು ಮಟ್ಟದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ತೋಟಗಾರಿಕೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.
