ಶಿವಮೊಗ್ಗ: ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರವನ್ನು ಅಶ್ಲೀಲವಾಗಿ ಚಿತ್ರಿಸಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಕಾರ್ಯಕರ್ತೆ ಬಿಂದು ಸಿರ ವಿರುದ್ಧ ರಾಷ್ಟ್ರಪ್ರೇಮಿ ವಕೀಲರ ಸಂಘ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಲಾಗಿದೆ.
ಶಿವಮೊಗ್ಗ: ಕೋಟೆ ಮಾರಿಕಾಂಬಾ ಜಾತ್ರೆಗೆ ಭರ್ಜರಿ ಸಿದ್ಧತೆ; ಮಾರಿಗದ್ದುಗೆಗೆ ಎಸ್.ಪಿ ನಿಖಿಲ್ ಬಿ ಭೇಟಿ.
ಕಾಂಗ್ರೆಸ್ ಕಾರ್ಯಕರ್ತೆ ಬಿಂದು ಸಿರ ಎನ್ನುವವರು ಪ್ರಧಾನಿ ಮೋದಿಯವರ ಫೋಟೋವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೆ, ಅಂತರಾಷ್ಟ್ರೀಯ ಮಟ್ಟದ ಎಪ್ಸ್ಟೀನ್ ಫೈಲ್ಸ್‌ನಲ್ಲಿ ಪ್ರಧಾನಿ ಮೋದಿಯವರ ಹೆಸರಿದೆ ಎಂದು ಸುಳ್ಳು ಆರೋಪ ಮಾಡುವ ಮೂಲಕ ಸಾರ್ವಜನಿಕರಲ್ಲಿ ದ್ವೇಷ ಭಾವನೆ ಬಿತ್ತುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪ್ರೇಮಿ ವಕೀಲರ ಸಂಘವು ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.
ದೂರು ನೀಡಿದ ನಂತರ ರಾಷ್ಟ್ರಪ್ರೇಮಿ ವಕೀಲರ ಸಂಘದ ಪ್ರಮುಖರಾದ ಸುರೇಶ್ ಬಾಬು ಮಾತನಾಡಿ, ಬಿಂದು ಸಿರ ಎಂಬ ಕಾಂಗ್ರೆಸ್ ಕಾರ್ಯಕರ್ತೆ ಪ್ರಧಾನಿ ಮೋದಿಯವರ ಚಿತ್ರವನ್ನು ಅಶ್ಲೀಲವಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಅಷ್ಟೇ ಅಲ್ಲದೆ ಎಪ್ಸ್ಟೀನ್ ಫೈಲ್ಸ್‌ನಲ್ಲಿ ಮೋದಿಯವರ ಹೆಸರಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿ ಜನರ ನಡುವೆ ದ್ವೇಷ ಉಂಟುಮಾಡುತ್ತಿದ್ದಾರೆ. ಸಂವಿಧಾನದಲ್ಲಿ ಎಲ್ಲರಿಗೂ ಮಾತನಾಡುವ ಹಕ್ಕಿದೆ, ಆದರೆ ಯಾರನ್ನೂ ಅಶ್ಲೀಲವಾಗಿ ನಿಂದಿಸುವ ಅಧಿಕಾರವನ್ನು ಯಾರಿಗೂ ನೀಡಿಲ್ಲ. ಇವರು ಈ ಹಿಂದೆಯೂ ಕೂಡ ಈಕೆ ಅನೇಕ ಗಣ್ಯ ವ್ಯಕ್ತಿಗಳ ವಿರುದ್ದ ಅವಹೇಳನಕಾರಿ ಪೋಸ್ಟ್ ಹಾಕಿದ್ದರು. ಆದ್ದರಿಂದ ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ ಎಂದು ತಿಳಿಸಿದರು.
PM Modi Obscene Post Complaint Against Bindu Sira


