ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಲಿದ್ದಾರೆ ಪ್ರಧಾನಿ ಮೋದಿ : ಯಾವಾಗ

prathapa thirthahalli
Prathapa thirthahalli - content producer

PM Modi Udupi visit  ಉಡುಪಿ: ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ಬೃಹತ್ ಗೀತೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 28 ರಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ನೀಡಿದ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.

ಈ ಹಿಂದೆ, ಪುತ್ತಿಗೆ ಶ್ರೀಪಾದರ ಗೀತಾ ಪ್ರಚಾರ ಕಾರ್ಯವನ್ನು ಪ್ರಧಾನಿ ಮೋದಿ ಅವರು ಪ್ರಶಂಸಿಸಿದ್ದರು. ಅದರಲ್ಲೂ, ಶ್ರೀಗಳು ಸಂಕಲ್ಪಿಸಿರುವ ‘ಕೋಟಿ ಗೀತಾ ಲೇಖನ ಯಜ್ಞ’ದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶ್ರೀಗಳಿಗೆ ಅಭಿನಂದನಾ ಪತ್ರವನ್ನೂ ರವಾನಿಸಿದ್ದರು.

- Advertisement -

ಪುತ್ತಿಗೆ ಶ್ರೀಪಾದರ ತೃತೀಯ ಪರ್ಯಾಯದ ಸಂದರ್ಭದಲ್ಲಿಯೂ ನರೇಂದ್ರ ಮೋದಿ ಅವರು ಶ್ರೀ ಕೃಷ್ಣ ಮಠಕ್ಕೆ ಆಗಮಿಸಿದ್ದರು. ಆ ಸಮಯದಲ್ಲಿ ಅವರು ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದರು.. ಇದೀಗ ಪ್ರಧಾನಿಯಾಗಿ ಮೋದಿ ಅವರು ಎರಡನೇ ಬಾರಿಗೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡುತ್ತಿದ್ದಾರೆ.

PM Modi Udupi visit

PM Modi Udupi visit

Share This Article
Leave a Comment

Leave a Reply

Your email address will not be published. Required fields are marked *