ಬಾಲಕಿಯ ಮೇಲೆ ದೌರ್ಜನ್ಯಕ್ಕೆ ಸಹಕಾರ ನೀಡಿದ ಹೋಂಸ್ಟೇ ಮಾಲೀಕ, ರೂಮ್ ಬಾಯ್​! ಮೂವರಿಗೂ ಕೋರ್ಟ್​ ಕೊಟ್ಟ ಶಿಕ್ಷೆ ಏನು ಗೊತ್ತಾ? ಇದೆ ಮೊದಲು

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:  ಶಿವಮೊಗ್ಗ ಜಿಲ್ಲೆಯ ತಾಲ್ಲೂಕು ವ್ಯಾಪ್ತಿಯೊಳಗೆ 2023 ರಲ್ಲಿ ನಡೆದಿದ್ದ ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಕೋರ್ಟ್  ತೀರ್ಪು ನೀಡಿದೆ. 

ಬಾಲಕಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಮುಖ ಆರೋಪಿ ಹಾಗೂ ಈ ಕೃತ್ಯಕ್ಕೆ ಪರೋಕ್ಷವಾಗಿ ಸಾಥ್ ನೀಡಿದ ಹೋಂಸ್ಟೇ ಮಾಲೀಕ ಮತ್ತು ಸಿಬ್ಬಂದಿಗೆ ಕೋರ್ಟ್​ ಶಿಕ್ಷೆ ವಿಧಿಸಿದೆ. 11-09-2023 ರಂದು 26 ವರ್ಷದ ವ್ಯಕ್ತಿಯೊಬ್ಬ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಕಾರಿನಲ್ಲಿ ಎಳೆದುಕೊಂಡು ಹೋಗಿದ್ದ. ಅಷ್ಟೆ ಅಲ್ಲದೆ ಅನಧಿಕೃತವಾಗಿದ್ದ ಹೋಂಸ್ಟೇ ಒಂದರಲ್ಲಿ ಆಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಘಟನೆ ಕುರಿತು ಸಂತ್ರಸ್ತ ಬಾಲಕಿ ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಜಿಲ್ಲೆಯ ತಾಲ್ಲೂಕು ಒಂದರ ಪ್ರಮುಖ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ವಿಚಾರಣೆ ನಡೆಸಿದ್ದ ಅಂದಿನ ಡಿವೈಎಸ್​ಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್​ಶೀಟ್​ ಸಲ್ಲಿಸಿದ್ದರು. POCSO Case 20 Years

POCSO Case 20 Years

ಶಿವಮೊಗ್ಗ ಪೊಲೀಸಪ್ಪನ ಕರ್ತವ್ಯ ನಿಷ್ಠೆ ಮತ್ತು ಮೃತ ಮಹಿಳೆಯ ಚಿನ್ನ, ದುಡ್ಡಿನ ಕಥೆ!

ಇನ್ನೂ ತನಿಖೆಯಲ್ಲಿ  ಅತ್ಯಾಚಾರ ಎಸಗಿದ ವ್ಯಕ್ತಿಯಷ್ಟೆ ಅಲ್ಲದೆ, ಕೃತ್ಯಕ್ಕೆ ಅನಧಿಕೃತ ಹೋಂಸ್ಟೇ ನಡೆಸುತ್ತಿದ್ದ 58 ವರ್ಷದ ಮಾಲೀಕ ಹಾಗೂ ಅಲ್ಲಿ ಕೆಲಸ ಮಾಡುತ್ತಿದ್ದ 24 ವರ್ಷದ ರೂಮ್ ಬಾಯ್, ಬಾಲಕಿಯ ವಯಸ್ಸಿನ ಬಗ್ಗೆ ಯಾವುದೇ ದಾಖಲೆಗಳನ್ನು ಪರಿಶೀಲಿಸದೆ ಪದೇ ಪದೇ ಉಳಿದುಕೊಳ್ಳಲು ಅವಕಾಶ ನೀಡಿದ್ದ ವಿಚಾರ ಹೊರಬಿದ್ದಿತ್ತು. ಈ ಸಂಬಂಧ ಅಪ್ರಾಪ್ತೆಯ ಮೇಲೆ ದೌರ್ಜನ್ಯ ನಡೆಯಲು ಆರೋಪಿಗಳು ಸಹಕಾರ ನೀಡಿದ್ದನ್ನು ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಲಾಗಿತ್ತು.  

POCSO Case 20 Years
POCSO Case 20 Years

ಶಿವಮೊಗ್ಗದಲ್ಲಿ ಇವತ್ತು ಏನೆಲ್ಲಾ ನಡೆಯಿತು ಇ-ಪೇಪರ್​ ಓದಿ

ಇನ್ನೂ ಕೋರ್ಟ್​ ವಿಚಾರಣೆಯಲ್ಲಿ ಸರ್ಕಾರದ ಪರವಾಗಿ ನ್ಯಾಯಾಲಯದಲ್ಲಿ ಸರ್ಕಾರಿ ಅಭಿಯೋಜಕ ಶ್ರೀಧರ್ ಅವರು ಪ್ರಬಲವಾಗಿ ವಾದ ಮಂಡಿಸಿದ್ದರು. ವಾದ ಪ್ರತಿವಾದಗಳನ್ನು ಆಲಿಸಿದ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ FTSC-1 ರ  ನ್ಯಾಯಾಧೀಶರಾದ ನಿಂಗನಗೌಡ ಭ ಪಾಟೀಲ್ ಪ್ರಕರಣದಲ್ಲಿ ತೀರ್ಪು ನೀಡಿದ್ದಾರೆ.

ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಸಿಬ್ಬಂದಿಗಳಿಂದಲೇ ಆಪರೇಷನ್​ ಮೊಬೈಲ್​ !  ಸಿಕ್ತು 10 ಸಾವಿರ ಬಹುಮಾನ

ಮೂವರು ಆರೋಪಿಗಳಿಗೆ ತಲಾ 20 ವರ್ಷಗಳ ಸಜೆ ವಿಧಿಸಿದ ನ್ಯಾಯಾಲಯ (POCSO Case 20 Years) ಮೊದಲ ಆರೋಪಿಗೆ 71,000 ರೂ ದಂಡ ಹಾಗೂ ಪ್ರಕರಣದಲ್ಲಿ ಸಹಕರಿಸಿದ 2 ಮತ್ತು 3ನೇ ಆರೋಪಿಗಳಿಗೆ ತಲಾ 10,000 ರೂ ದಂಡ ವಿಧಿಸಿದ್ದಾರೆ. 

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel  instagram youtube telegram  google business   malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!

POCSO Case 20 Years

Shivamogga news live, Shimoga news kannada live, ಶಿವಮೊಗ್ಗ ನ್ಯೂಸ್ today, Shimoga news kannada epaper today, ಶಿವಮೊಗ್ಗ ನ್ಯೂಸ್ yesterday, Malenadu news live, ಮಲೆನಾಡು ಸುದ್ದಿ, ಶಿವಮೊಗ್ಗ ಜಿಲ್ಲಾ ವಾರ್ತೆ, 

 ಪೋಕ್ಸೋ ಪ್ರಕರಣ: ಅಪ್ರಾಪ್ತ ಬಾಲಕಿ ಮೇಲೆ ದೌರ್ಜನ್ಯವೆಸಗಿದ ಮೂವರಿಗೆ 20 ವರ್ಷ ಜೈಲು ಶಿಕ್ಷೆ,   POCSO Case 20 Years Imprisonment for Three Convicts in Minor Girl Assault Case
ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು