SHIVAMOGGA NEWS TODAY

4 ವರ್ಷದ ಹಿಂದಿನ ಘಟನೆ, 22 ವರ್ಷದವನಿಗೆ 20 ವರ್ಷ ಶಿಕ್ಷೆ, ಲಕ್ಷಾಂತರ ರೂಪಾಯಿ ದಂಡ?

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ: ಭದ್ರಾವತಿಯಲ್ಲಿ 2022 ರಲ್ಲಿ ನಡೆದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಭದ್ರಾವತಿಯ ಯುವಕನಿಗೆ ಶಿವಮೊಗ್ಗದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಕಠಿಣ ಶಿಕ್ಷೆ ಹಾಗೂ ದಂಡವನ್ನು ವಿಧಿಸಿ ತೀರ್ಪು ನೀಡಿದೆ.

ಶಿವಮೊಗ್ಗ ವಿಮಾನ ನಿಲ್ದಾಣಶಿವಮೊಗ್ಗ ಏರ್​ಪೋರ್ಟ್​ ವಿಶ್ವೇಶ್ವರ್​ ಭಟ್​ Facebook post ,ಷೇರ್ ಮಾಡಿ ರಿಪ್ಲೆ ನೀಡಿದ ಸಂಸದ

POCSO Case ಘಟನೆ ವಿವರ

ಭದ್ರಾವತಿಯ ಯುವಕನೊಬ್ಬ 2022ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಸಂಬಂಧ ಆತನ ವಿರುದ್ಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅಂದಿನ ತನಿಖಾಧಿಕಾರಿಗಳಾಗಿದ್ದ ಜಿತೇಂದ್ರಕುಮಾರ್ ದಯಾಮಾಪ್ರಕರಣದ ಸಮಗ್ರ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್ ಅವರು ವಾದ ಮಂಡಿಸಿದ್ದರು. ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ನಿಂಗನಗೌಡ ಪಾಟೀಲ್ ಅವರು ಮಹತ್ವದ ತೀರ್ಪು ಪ್ರಕಟಿಸಿದ್ದಾರೆ. 

ಆರೋಪಿತನಿಗೆ 20 ವರ್ಷಗಳ ಕಠಿಣ ಸಜೆ ಹಾಗೂ 2,50,000 ರೂ. ದಂಡ ವಿಧಿಸಿದ್ದಾರೆ. ಅಲ್ಲದೆ, ನೊಂದ ಬಾಲಕಿಗೆ 2,25,000 ರೂ. ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.

POCSO Case Youth Gets 20 Years Jail

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ಟ್ಯಾಗ್‌ಗಳು:
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.