Police Action on Public Nuisance ಶಿವಮೊಗ್ಗ, malenadu today news , ಶಿವಮೊಗ್ಗ ಪೊಲೀಸರು ಹಬ್ಬದ ಹಿನ್ನೆಲೆಯಲ್ಲಿ ಏರಿಯಾ ಡಾಮಿನೇಷನ್ ಹಾಗೂ ಕಾಲ್ನಡಿಗೆ ಜಾಥಾವನ ್ನ ಇನ್ನಷ್ಟು ಚುರುಕುಗೊಳಿಸಿದ್ದಾರೆ.
ಅಲ್ಲದೆ ಈ ಸಂಬಂಧ ನಿನ್ನೆ ದಿನ ಒಟ್ಟು 1120 ಕೇಸ್ಗಳನ್ನು ದಾಖಲಿಸಿದ್ದಾರೆ. ಈ ಬಗ್ಗೆ ಪೊಲೀಸ್ ಪ್ರಕಟಣೆಯ ವಾಟ್ಸಾಪ್ ಗ್ರೂಪ್ನಲ್ಲಿ ಮಾಹಿತಿ ನೀಡಿದ್ದು, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್ 13, 2025 ರಂದು ಜಿಲ್ಲೆಯಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸಲಾಯಿತು ಎಂದು ತಿಳಿಸಿದೆ.
ಆಯಾ ವಿಭಾಗದ ಡಿವೈಎಸ್ಪಿ ನೇತೃತ್ವದಲ್ಲಿ Deputy Superintendent of Police ಇನ್ಸ್‌ಪೆಕ್ಟರ್‌ಗಳು, ಸಬ್-ಇನ್ಸ್‌ಪೆಕ್ಟರ್‌ಗಳು ಮತ್ತು ಸಿಬ್ಬಂದಿ ‘ಏರಿಯಾ ಡಾಮಿನೇಷನ್’ ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ಕಾಲ್ನಡಿಗೆ ಗಸ್ತು (Foot Patrolling) ನಡೆಸಿದೆ.
ಈ ವೇಳೆ ಸಾರ್ವಜನಿಕರಿಗೆ ತೊಂದರೆ ನೀಡಿದ ಹಾಗೂ ಅನುಮಾನಾಸ್ಪದ ವ್ಯಕ್ತಿಗಳ ವಿರುದ್ಧ 112 ಸಣ್ಣ ಪ್ರಕರಣಗಳು ಮತ್ತು COTPA ಕಾಯ್ದೆಯಡಿ 8 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Police Action on Public Nuisance

