ಶಿವಮೊಗ್ಗ : ಇಲ್ಲಿನ ದೊಡ್ಡಪೇಟೆ ಮತ್ತು ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನ್ಯಾಯಾಂಗದ ವಾರಂಟ್ ನಡುವೆಯು ಕೋರ್ಟ್ಗೆ ಹಾಜರಾಗದವರ ವಿರುದ್ಧ ಸ್ಪೆಷಲ್ ಡ್ರೈವ್ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಒಟ್ಟು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ವಿಮೆ ನೀಡಲು ಸತಾಯಿಸಿದ ಕಂಪೆನಿಗೆ ಶಿವಮೊಗ್ಗ ಗ್ರಾಹಕ ನ್ಯಾಯಾಲಯದ ಚಾಟಿ: ಕೋರ್ಟ್ ನೀಡಿದ ತೀರ್ಪು ಏನು
ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಚೆಕ್ ಅಮಾನ್ಯ ಪ್ರಕರಣದ ಆರೋಪಿ ಒಬ್ಬರನ್ನು ಪೊಲೀಸರು ಆಯನೂರು ಗ್ರಾಮದಲ್ಲಿ ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಸುಮಾರು 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಈತನ ವಿರುದ್ಧ ಶಿವಮೊಗ್ಗದ ನ್ಯಾಯಾಲಯವು ಕನ್ವಿಕ್ಷನ್ ವಾರೆಂಟ್ ಹೊರಡಿಸಿತ್ತು. ದೊಡ್ಡಪೇಟೆ ಇನ್ಸ್ ಪೆಕ್ಟರ್ ರವಿ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ಮಂಜುನಾಥ ಮತ್ತು ರವೀಂದ್ರ ಅವರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಸದ್ಯ ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಮತ್ತೊಂದು ಪ್ರಕರಣದಲ್ಲಿ ಸೊರಬ ಪೊಲೀಸರು ಕಳೆದ 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 2016 ರಲ್ಲಿ ದಾಖಲಾಗಿದ್ದ ವಿವಿಧ ಐಪಿಸಿ ಕಲಂ ಅಡಿಯಲ್ಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕಾರಿಪುರ ತಾಲೂಕಿನ ಇಬ್ಬರ ವಿರುದ್ಧ ನ್ಯಾಯಾಲಯವು ದಸ್ತಗಿರಿ ವಾರೆಂಟ್ ಜಾರಿಗೊಳಿಸಿತ್ತು. ಸೊರಬ ಸಿಪಿಐ
ಮಹಾಂತೇಶ್ ಕೆ ಲಂಬಿ ಮತ್ತು ಪಿಎಸ್‌ಐ ನವೀನ್ ಅವರ ನೇತೃತ್ವದಲ್ಲಿ ಮುಖ್ಯ ಪೇದೆ ಸೋಮಾನಾಯ್ಕ ಅವರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಧೀಶರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ್ದಾರೆ.
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.
ಶಿವಮೊಗ್ಗ ದೊಡ್ಡಪೇಟೆ ಮತ್ತು ಸೊರಬ ಪೊಲೀಸರಿಂದ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ , Shimoga Doddapete and Soraba Police Arrested 3 Absconding Accused
