INFORMATION NEWS

3,991 ಸಿವಿಲ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಜೂನ್ 10 ರಿಂದ ಅರ್ಜಿ ಆಹ್ವಾನ

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Police Constable recruitment ಮಲೆನಾಡು ಟುಡೆ ಸುದ್ದಿ / ಬೆಂಗಳೂರು / ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 3,991 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ.

  • ಜೂನ್ 10 ರಿಂದ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಆರಂಭಗೊಳ್ಳಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪಷ್ಟಪಡಿಸಿದೆ.
  • ನೇಮಕಾತಿ ನಡೆಯಲಿರುವ ಒಟ್ಟು 3,991 ಹುದ್ದೆಗಳ ಪೈಕಿ 596 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಭಾಗಕ್ಕೆ ಮೀಸಲಿಡಲಾಗಿದೆ
  • ಉಳಿದ 3,395 ಹುದ್ದೆಗಳನ್ನು ಸಾಮಾನ್ಯ ಮೂಲ ವೃಂದಕ್ಕೆ ನಿಗದಿಪಡಿಸಲಾಗಿದೆ.

ಪರಿಶಿಷ್ಟ ಜಾತಿಯ ವರ್ಗದಡಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಒಳಮೀಸಲಾತಿಯ ನಿಯಮಗಳು ಅನ್ವಯವಾಗಲಿದ್ದು, ಈ ಹಿನ್ನೆಲೆಯಲ್ಲಿ ಅವರು ತಮಗೆ ಅನ್ವಯವಾಗುವ ಎಸ್ಸಿ-ಎ, ಎಸ್ಸಿ-ಬಿ ಅಥವಾ ಎಸ್ಸಿ-ಸಿ ಜಾತಿ ಪ್ರಮಾಣ ಪತ್ರಗಳ ಆರ್‌ಡಿ ಸಂಖ್ಯೆಯನ್ನು ಅರ್ಜಿಯಲ್ಲಿ ಕಡ್ಡಾಯವಾಗಿ ನಮೂದಿಸಬೇಕಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಸಲ್ಲಿಸಲು ಜುಲೈ 3 ಕೊನೆಯ ದಿನಾಂಕವಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತನ್ನ ಪ್ರಕಟಣೆಯಲ್ಲಿ ಸಮಗ್ರ ಮಾಹಿತಿ ಒದಗಿಸಿದೆ.

Police Constable recruitment 2026

Whatsapp  : https://chat.whatsapp.com/JrsZ8He4nN600n0r3tJItz

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ಟ್ಯಾಗ್‌ಗಳು:
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ