dazzling and flaring ಹೆಡ್‌ಲೈಟ್‌ ಹಾಕಿದ್ರೆ ಬೀಳುತ್ತೆ ಕೇಸ್‌ | ಏನಿದು ಪೊಲೀಸ್‌ ಇಲಾಖೆ ರೂಲ್ಸ್‌

police department has issued a warning against the use of high-intensity LED bulbs in vehicles.

dazzling and flaring ಹೆಡ್‌ಲೈಟ್‌ ಹಾಕಿದ್ರೆ ಬೀಳುತ್ತೆ ಕೇಸ್‌ | ಏನಿದು ಪೊಲೀಸ್‌ ಇಲಾಖೆ ರೂಲ್ಸ್‌
police department, LED bulbs in vehicles

SHIVAMOGGA | MALENADUTODAY NEWS | Jun 20, 2024  ಮಲೆನಾಡು ಟುಡೆ 

ವಾಹನಗಳಲ್ಲಿ ಇತ್ತೀಚೆಗೆ ಬರುತ್ತಿರುವ ಎಲ್‌ಇಡಿ ಬಲ್ಪ್‌ಗಳ ಅಳವಡಿಕೆಗೆ ಪೊಲೀಸ್‌ ಇಲಾಖೆ ಬ್ರೇಕ್‌ ಹಾಕಿದೆ. ಈ ಬಲ್ಪ್‌ಗಳಿಂದ ಹೊಮ್ಮುವ ಬೆಳಕು ಎದುರುಗಡೆ ಬರುವ ವಾಹನಸವಾರರ ಕಣ್ಣು ಕುಕ್ಕುತ್ತದೆ. ಇದರಿಂದ ಅಪಘಾತಕ್ಕೂ ಕಾರಣವಾಗುತ್ತಿದೆ. ಹೀಗಾಗಿ ಈ ನಿಟ್ಟಿನಲ್ಲಿ ವಾಹನಗಳಲ್ಲಿ‌ (dazzling and glaring)  ಎಲ್‌ಇಡಿ ಬಲ್ಪ್‌ಗಳನ್ನ ಅಳವಡಿಸಿದರೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಲಾಗಿದೆ.  

ಅದರ ವಿವರ ನೋಡುವುದಾದರೆ, ಪೊಲೀಸ್‌ ಇಲಾಖೆಯ ಮಾಹಿತಿ ಹೀಗಿದೆ.  ಇತ್ತೀಚಿನ ದಿನಗಳಲ್ಲಿ ಹಲವಾರು ವಾಹನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ ದೀಪಗಳನ್ನು ಅಳವಡಿಸಲಾಗುತ್ತಿದೆ.  ಇದರಿಂದ ಎದುರು ಮುಖದಲ್ಲಿ ಸಂಚರಿಸುವ ಇತರೆ ವಾಹನ ಸವಾರರಿಗೆ ತೀವು ತೊಂದರೆಯುಂಟಾಗುತ್ತಿದೆ. ಹಾಗೂ ಇದರಿಂದ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುತ್ತಿರುವುದು ಕಂಡು ಬಂದಿರುತ್ತದೆ. ಈ ಪೈಕಿ ಪ್ರಮುಖವಾಗಿ ಭಾರಿ ಗಾತ್ರ ವಾಹನಗಳಾದ ಲಾರಿ, ಟ್ರಕ್. ಬಸ್ ಮುಂತಾದವುಗಳು ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ (dazzling and glaring) ಎಲ್ ಇಡಿ ದೀಪಗಳನ್ನು ತಮ್ಮ ವಾಹನಗಳಲ್ಲಿ ಅಳವಡಿಸುತ್ತಿರುವುದರಿಂದ ಇತರೆ ವಾಹನ ಚಾಲಕರುಗಳಿಗೆ ವಾಹನ ಚಲಾಯಿಸಲು ತೊಂದರೆಯಾಗುತ್ತಿರುತ್ತದೆ.

ಎಲ್ಲಾ ವಾಹನ ಸವಾರರು ತಮ್ಮ ತಮ್ಮ ವಾಹನಗಳಿಗೆ ಕೇಂದ್ರ ಮೋಟಾರು ವಾಹನ ಕಾಯ್ಕೆಯಲ್ಲಿ ನಮೂದಿಸಿರುವ ಮಾನದಂಡದಂತೆ ಆಳವಡಿಸಬೇಕಾಗಿರುವ ಹೆಡ್‌ಲೈಟ್‌ಗಳನ್ನ ಅಳವಡಿಸಬೇಕಾಗಿರುವುದು ಕಡ್ಡಾಯವಾಗಿರುತ್ತದೆ. ಒಂದು ವೇಳೆ ಸಿಎಂವಿ ಕಾಯ್ದೆಯಲ್ಲಿನ ನಿಯಮಗಳನ್ನು ಉಲ್ಲಂಘನೆ ಮಾಡಿದ್ದಲ್ಲಿ ಅಂತಹ ವಾಹನ ಸವಾರರ ವಿರುದ್ಧ ಐಎಂವಿ ಕಾಯ್ದೆಯ ಕಲಂ 177 ರಡಿ ಪ್ರಕರಣಗಳನ್ನು ದಾಖಲಿಸಬಹುದಾಗಿರುತ್ತದೆ

ಆದ್ದರಿಂದ, ಘಟಕಾಧಿಕಾರಿಗಳು ತಮ್ಮ ತಮ್ಮ ಘಟಕಗಳಲ್ಲಿ ಸಂಚರಿಸುವ ವಾಹನಗಳಲ್ಲಿ ಈ ರೀತಿಯ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿರುವುದು ಕಂಡು ಬಂದಲ್ಲಿ, ಅಂತಹ ವಾಹನ ಸವಾರರ ವಿರುದ್ಧ ಐಎಂವಿ ಕಾಯ್ದೆಯ ಕಲಂ 177 ರಡಿ ಪ್ರಕರಣಗಳನ್ನು ದಾಖಲು ಮಾಡಲು ಸೂಕ್ತ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ. 

ಈ ರೀತಿ ವಾಹನಗಳಲ್ಲಿ ಹೆಚ್ಚು, ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿರುವ ವಾಹನ ಚಾಲಕರ ವಿರುದ್ಧ ಜುಲೈ ಮಾಹೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, ಪ್ರಕರಣಗಳನ್ನು ದಾಖಲಿಸಿ, ಕೈಗೊಂಡ ಕ್ರಮ ಬಗ್ಗೆ, ಪಾಲನಾ ವರದಿಯನ್ನು ದಿನಾಂಕ 31.07.2024 ರೊಳಗಾಗಿ ಈ ಕಛೇರಿಗೆ ಸಲ್ಲಿಸಲು ಸೂಚಿಸಲಾಗಿದೆ.

The police department has issued a warning against the use of high-intensity LED bulbs in vehicles. These bulbs can cause glare for oncoming drivers, leading to accidents. This is particularly a problem with large vehicles like trucks and buses.

  • Vehicles must adhere to Central Motor Vehicle Rules regarding headlights.

  • Violations can result in cases filed under Section 177 of the IMV Act.

  • A special operation will be conducted in July to crack down on vehicles with these non-compliant LED bulbs.