ಪೊಲೀಸ್ ಕಾನ್‌ ಸ್ಟೆಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆ, ಪುಲ್ ಶರ್ಟ್, ಬೂಟಿಗೆ ನಿರ್ಬಂಧ

Published: 31 ಜುಲೈ 2026, 3:11 ಅಪರಾಹ್ನ • 1 min read
✨ AI ಓವರ್‌ವ್ಯೂ (ಮುಖ್ಯಾಂಶ)

Police Exam Dress Code ಶಿವಮೊಗ್ಗ : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ವೃಂದಗಳ ಅಂದಾಜು 3400 ಪೊಲೀಸ್ ಕಾನ್‌ ಸ್ಟೆಬಲ್ ಹುದ್ದೆಗಳ ನೇರ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆಗಸ್ಟ್ 02 ರಂದು ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಯೋಜಿಸಿದೆ.  ಶಿವಮೊಗ್ಗ : ಖಾಸಗಿ ಹೋಟೆಲ್​ನಲ್ಲಿ ಉದ್ಯಮಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ? ಅಂದು…

Police Exam Dress Code ಶಿವಮೊಗ್ಗ : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ವೃಂದಗಳ ಅಂದಾಜು 3400 ಪೊಲೀಸ್ ಕಾನ್‌ ಸ್ಟೆಬಲ್ ಹುದ್ದೆಗಳ ನೇರ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆಗಸ್ಟ್ 02 ರಂದು ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಯೋಜಿಸಿದೆ. 

ಶಿವಮೊಗ್ಗ : ಖಾಸಗಿ ಹೋಟೆಲ್​ನಲ್ಲಿ ಉದ್ಯಮಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ?

ಅಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ನಗರದ ಒಟ್ಟು 28 ಪರೀಕ್ಷಾ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯಲಿದ್ದು, ಸುಗಮ ನಿರ್ವಹಣೆಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ತಿಳಿಸಿದ್ದಾರೆ. ತಮ್ಮ ಕಚೇರಿಯ ಸಭಾಂಗಣದಲ್ಲಿ ಪೊಲೀಸ್ ನೇಮಕಾತಿ ಪರೀಕ್ಷೆಯ ಹಿನ್ನೆಲೆಯಲ್ಲಿ ಕರೆಯಲಾಗಿದ್ದ ಪೂರ್ವಸಿದ್ಧತಾ ಸಭೆಯಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಈ ಪರೀಕ್ಷೆಯಲ್ಲಿ ಸುಮಾರು 10,737 ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದು, ಕರ್ತವ್ಯ ನಿರ್ವಹಿಸಲುಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಿ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ. ಪರೀಕ್ಷಾ ಸಂದರ್ಭದಲ್ಲಿಯಾವುದೇ ಅಹಿತಕರ ಘಟನೆಗಳು ಜರುಗದಂತೆ ಹಾಗೂ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ತೊಂದರೆಯಾಗದಂತೆ ಎಚ್ಚರವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಹೊರಡಿಸಿರುವ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಆನುಸರಿಸಬೇಕು ಮತ್ತು ಪರೀಕ್ಷಾರ್ಥಿಗಳಿಗೆ ಅನಗತ್ಯ ಕಿರಿಕಿರಿ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಕಟ್ಟುನಿಟ್ಟಾಗಿ ತಿಳಿಸಿದರು. ಪರೀಕ್ಷಾ ಕಾರ್ಯಕ್ಕಾಗಿ ಮುಖ್ಯ ಅಧೀಕ್ಷಕರು, ವೀಕ್ಷಕರು, ಮಾರ್ಗಾಧಿಕಾರಿಗಳು ಹಾಗೂ ವಿಶೇಷ ಜಾಗೃತ ದಳಗಳನ್ನು ರಚಿಸಲಾಗಿದ್ದು, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ. ಪರೀಕ್ಷೆ ನಡೆಯುವ ಸಮಯದಲ್ಲಿ ವಿದ್ಯುತ್ ಕಡಿತವಾಗದಂತೆ ನೋಡಿಕೊಳ್ಳಲು ಮೆಸ್ಕಾಂ ಅಭಿಯಂತರರಿಗೆ ವಿಶೇಷವಾಗಿ ಮನವಿ ಮಾಡಲಾಗಿದೆ ಎಂದು ಅವರು ವಿವರಿಸಿದರು.

ಪರೀಕ್ಷಾರ್ಥಿಗಳಿಗೆ ಕಟ್ಟುನಿಟ್ಟಿನ ವಸ್ತ್ರಸಂಹಿತೆಯನ್ನು ಜಾರಿಗೊಳಿಸಲಾಗಿದ್ದು, ಉದ್ದನೆಯ ತೋಳಿನ ಅಂಗಿ ಹಾಗೂ ಶೂಗಳನ್ನು ಧರಿಸಿಕೊಂಡು ಬರುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಇದರ ಜೊತೆಗೆ ಎಲೆಕ್ಟ್ರಾನಿಕ್ ಉಪಕರಣಗಳು, ಕ್ಯಾಲ್ಕುಲೇಟರ್, ಸ್ಮಾರ್ಟ್ ವಾಚ್, ಮೊಬೈಲ್ ಫೋನ್, ನೋಟ್ಸ್, ಬ್ಯಾಗ್ ಹಾಗೂ ಆಹಾರ ಮತ್ತು ಪಾನೀಯಗಳನ್ನು ಪರೀಕ್ಷಾ ಕೇಂದ್ರದೊಳಗೆ ಕೊಂಡೊಯ್ಯುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಪರೀಕ್ಷೆಯನ್ನು ಅತ್ಯಂತ ಶಾಂತಿಯುತವಾಗಿ ನಡೆಸಲು ಹಾಗೂ ಯಾವುದೇ ಅಕ್ರಮ-ಅವ್ಯವಹಾರಗಳಿಗೆ ಆಸ್ಪದ ನೀಡದಂತೆ ಬಿಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಆಕ್ರಮಗಳನ್ನು ತಡೆಯಲು ಪರೀಕ್ಷಾ ದಿನದಂದು ಎಲ್ಲಾ ಕೇಂದ್ರಗಳಲ್ಲಿ ಬ್ಲೂಟೂತ್ ಜಾಮರ್‌ಗಳನ್ನು ಅಳವಡಿಸಲಾಗುವುದು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟ‌ರ್ ಪ್ರದೇಶವನ್ನು ನಿಷೇಧಿತ ವಲಯವೆಂದು ಘೋಷಿಸಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಈ ನಿಷೇಧಿತ ಪ್ರದೇಶದಲ್ಲಿ ಸಾರ್ವಜನಿಕರು ಗುಂಪುಗೂಡುವುದು, ಪ್ರವೇಶಿಸುವುದು ಹಾಗೂ ಸಭೆ-ಸಮಾರಂಭ ಮತ್ತು ಮೆರವಣಿಗೆಗಳನ್ನು ಆಯೋಜಿಸುವುದನ್ನು ನಿರ್ಬಂಧಿಸಲಾಗಿದೆ.

ಪರೀಕ್ಷಾ ಅವಧಿಯಲ್ಲಿ ಕೇಂದ್ರಗಳ ಸಮೀಪವಿರುವ ಜೆರಾಕ್ಸ್ ಹಾಗೂ ಸೈಬ‌ರ್ ಸೆಂಟರ್‌ಗಳನ್ನು ಕಡ್ಡಾಯವಾಗಿ ಮುಚ್ಚಿಸುವಂತೆ ಕ್ರಮ ವಹಿಸಲಾಗಿದೆ. ಪ್ರತಿಯೊಂದು ಪರೀಕ್ಷಾ ಕೇಂದ್ರಕ್ಕೂ ಭದ್ರತೆಗಾಗಿ ಓರ್ವ ಪುರುಷ ಹಾಗೂ ಓರ್ವ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಅವರು ತಿಳಿಸಿದ್ದಾರೆ. ಅಭ್ಯರ್ಥಿಗಳು ನಿಗದಿತ ಸಮಯಕ್ಕಿಂತ ಮುಂಚಿತವಾಗಿಯೇ ಕೇಂದ್ರಕ್ಕೆ ಆಗಮಿಸಬೇಕು ಹಾಗೂ ಮೇಲ್ವಿಚಾರಕರು ಕೊಠಡಿಗಳಲ್ಲಿ ಗಾಳಿ, ಬೆಳಕು, ಗೋಡೆಗಡಿಯಾರ, ಶುದ್ಧ ಕುಡಿಯುವ ನೀರು ಮತ್ತು ಶೌಚಾಲಯದ ವ್ಯವಸ್ಥೆ ಕಲ್ಪಿಸಬೇಕು ಎಂದು ಸಭೆಯಲ್ಲಿ ಸೂಚಿಸಲಾಗಿದೆ. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಜಿಲ್ಲಾ ಖಜಾನಾಧಿಕಾರಿ ಹೆಚ್. ಎಸ್. ಸಾವಿತ್ರಿ ಸೇರಿದಂತೆ ಪರೀಕ್ಷಾ ಕಾರ್ಯಕ್ಕೆ ನಿಯೋಜಿತರಾದ ಅಧಿಕಾರಿಗಳು ಉಪಸ್ಥಿತರಿದ್ದರು.

END OF STORY

Prathapa thirthahalli

Senior Journalist | Malenadu Today
✓ Verified Journalist