ಶಿವಮೊಗ್ಗ: ಪೊಲೀಸ್ ಹುತಾತ್ಮರ ದಿನಾಚರಣೆ; ಕರ್ತವ್ಯದಲ್ಲಿ ಪ್ರಾಣ ತೆತ್ತ ವೀರರಿಗೆ ಗಣ್ಯರಿಂದ ನಮನ

prathapa thirthahalli
Prathapa thirthahalli - content producer

Police Martyrs Day : ಶಿವಮೊಗ್ಗ: ದೇಶದ ಕಾನೂನು ಸುವ್ಯವಸ್ಥೆ ಮತ್ತು ರಾಷ್ಟ್ರದ ರಕ್ಷಣೆಯಲ್ಲಿ ಪ್ರಾಣ ತ್ಯಾಗ ಮಾಡಿದ ವೀರ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಸ್ಮರಿಸುವ ‘ಪೊಲೀಸ್ ಹುತಾತ್ಮರ ದಿನಾಚರಣೆ’ಯನ್ನು ಇಂದು  ಶಿವಮೊಗ್ಗ ನಗರದ ಜಿಲ್ಲಾ ಸಶಸ್ತ್ರ ಪೊಲೀಸ್ ಕವಾಯತು ಮೈದಾನದಲ್ಲಿ ಆಚರಿಸಲಾಯಿತು.

ಪ್ರತಿ ವರ್ಷ ಅಕ್ಟೋಬರ್ 21 ರಂದು ಪೊಲೀಸ್ ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತದೆ. 1959ರ ಅಕ್ಟೋಬರ್ 21ರಂದು ಲಡಾಖ್‌ನ ಹಾಟ್ ಸ್ಪ್ರಿಂಗ್ಸ್‌ನಲ್ಲಿ ಚೀನೀ ಸೈನಿಕರ ಆಕ್ರಮಣದಿಂದಾಗಿ ಡಿ.ಎಸ್.ಪಿ. ಕರಣ್ ಸಿಂಗ್ ನೇತೃತ್ವದ 10 ಸಿಬ್ಬಂದಿಗಳು ಹುತಾತ್ಮರಾದ ದಾರುಣ ಘಟನೆಯ ನೆನಪಿಗಾಗಿ ಈ ದಿನವನ್ನು ಆಚರಿಸಲಾಗುತ್ತದೆ.

Police Martyrs Day

ಶಿವಮೊಗ್ಗದ ಜಿಲ್ಲಾ ಸಶಸ್ತ್ರ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯಕ್ ಅವರು ವಹಿಸಿದ್ದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಹೇಮಂತ್ ಎನ್ಮುಖ್ಯ ಆಹ್ವಾನಿತರಾಗಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್, ಸಮಾಜದ ರಕ್ಷಣಾ ಕರ್ತವ್ಯ ನಿರ್ವಹಿಸುವಾಗ 2024ರ ಸೆಪ್ಟೆಂಬರ್ 1 ರಿಂದ 2025ರ ಆಗಸ್ಟ್‌ 31ರ ಅವಧಿಯಲ್ಲಿ ದೇಶದಾದ್ಯಂತ ಒಟ್ಟು 191 ಜನ ಪೊಲೀಸ್ ಅಧಿಕಾರಿ/ಸಿಬ್ಬಂದಿ ಮೃತಪಟ್ಟಿರುತ್ತಾರೆ. ಇದರಲ್ಲಿ ಕರ್ನಾಟಕ ರಾಜ್ಯದ 8 ಪೊಲೀಸ್ ಅಧಿಕಾರಿ/ಸಿಬ್ಬಂದಿ ಸೇರಿದ್ದಾರೆ ಎಂದು ಸ್ಮರಿಸಿದರು.

ಹುತಾತ್ಮರ ಸ್ತಂಭಕ್ಕೆ ಹೂಗುಚ್ಛ ಅರ್ಪಿಸುವ ಮೂಲಕ ಗಣ್ಯರು ಹಾಗೂ ಅಧಿಕಾರಿಗಳು ಗೌರವ ನಮನಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಕಾರಿಯಪ್ಪ ಎ.ಜಿ. ರಮೇಶ್ ಕುಮಾರ್ (ಎಎಸ್‌ಪಿ-2) ಸೇರಿದಂತೆ ಜಿಲ್ಲೆಯ ಕೆಎಸ್‌ಆರ್‌ಪಿ, ಕೆಎಸ್‌ಐಎಸ್‌ಎಫ್ ಮತ್ತು ವಿವಿಧ ಉಪ ವಿಭಾಗಗಳ ಪೊಲೀಸ್ ಉಪಾಧೀಕ್ಷಕರು ಮತ್ತು ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Police Martyrs Day
Police Martyrs Day

Malenadu Today

Share This Article