KARNATAKA NEWS/ ONLINE / Malenadu today/ Oct 12, 2023 SHIVAMOGGA NEWS
ಮಹತ್ವದ ಬೆಳವಣಿಗೆಯೊಂದರಲ್ಲಿ ಶಿವಮೊಗ್ಗದ ಇಂಡಸ್ಟ್ರೀಯಲ್ ಏರಿಯಾದಲ್ಲಿರುವ ಫ್ಯಾಕ್ಟರಿಯೊಂದರ ಮೇಲೆ ಪೊಲೀಸರು ರೇಡ್ ಮಾಡಿದ್ದಾರೆ. ದಾಳಿಯಲ್ಲಿ ಮಹತ್ವದ ವಿಚಾರಗಳು ಹೊರಬೀಳುವ ಸಾಧ್ಯತೆ ಇದ್ದು, ಈ ದಾಳಿ ಕುತೂಹಲ ಮೂಡಿಸಿದೆ.
ಶಿವಮೊಗ್ಗದ ನಿದಿಗೆ ಇಂಡಸ್ಟ್ರಿಯಲ್ ಏರಿಯಾದಲ್ಲಿ ಸಾಕು ಪ್ರಾಣಿಗಳಿಗೆ ನೀಡುವ ಆಹಾರವನ್ನು ತಯಾರು ಮಾಡುವ ಕಾರ್ಖಾನೆಯೊಂದು ಕಾರ್ಯ ನಿರ್ವಹಿಸುತ್ತಿದೆ. ಈ ಕಾರ್ಖಾನೆಯ ಮೇಲೆ ಇವತ್ತು ಪೊಲೀಸರು ರೇಡ್ ನಡೆಸಿದ್ದಾರೆ. ಪ್ರಾಥಮಿಕ ಹಂತದಲ್ಲಿ ಸಿಕ್ಕ ಮಾಹಿತಿ ಪ್ರಕಾರ, ಗೋವುಗಳಿಗೆ ಸಂಬಂಧಿಸಿದ ಬಳಸಿಕೊಂಡು ಸಾಕುಪ್ರಾಣಿಗಳಿಗೆ ಹಾಕುವ ಫೀಡ್ಗಳನ್ನು ತಯಾರು ಮಾಡುತ್ತಿದ್ದರು ಎನ್ನಲಾಗಿದೆ .
ಇದೇ ವಿಚಾರವಾಗಿ ಪೊಲೀಸ್ ಇಲಾಖೆ ದಾಳಿ ನಡೆಸಲಾಗಿದ್ದು, ಈ ಫ್ಯಾಕ್ಟರಿ ಶಿವಮೊಗ್ಗದಲ್ಲಿ ಪ್ರಭಾವಿ ವ್ಯಕ್ತಿಯವರದ್ದು ಎಂದು ಹೇಳಲಾಗುತ್ತಿದ್ದು, ಈ ಬಗ್ಗೆ ಪೊಲೀಸ್ ಇಲಾಖೆ ಇನ್ನೂ ದೃಢ ಪಡಿಸಿಲ್ಲ. ದಾಳಿ ನಡೆಸಿರುವ ತಂಡ, ಫ್ಯಾಕ್ಟರಿಯ ಮಾಲಿಕತ್ವದ ಬಗ್ಗೆ ದಾಖಲೆಗಳನ್ನು ಪರಿಶೀಲನೆ ನಡೆಸ್ತಿದೆ.
ಇನ್ನಷ್ಟು ಸುದ್ದಿಗಳು
