police trekking 10 ಕ್ಕೂ ಹೆಚ್ಚು ಜನ ಪೊಲೀಸರಿಂದ ಆಪರೇಶನ್ ಟ್ರೆಕ್ಕಿಂಗ್
ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂಧಿಗಳ ದೈಹಿಕ, ಮಾನಸಿಕ ಆರೋಗ್ಯ ಮತ್ತು ಸದೃಡತೆಯ ಹಿತದೃಷ್ಟಿಯಿಂದ ನಿನ್ನೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿಕೆ ನೇತೃತ್ವದಲ್ಲಿ ಟ್ರೆಕ್ಕಿಂಗ್ ಹಮ್ಮಿಕೊಳ್ಳಲಾಯಿತು.

ರಿಪ್ಪನ್ಪೇಟೆಯ ಜೇನುಕಲ್ಲಮ್ಮ ಗುಡ್ಡದಲ್ಲಿ ಹಮ್ಮಿಕೊಂಡಿದ್ದ ಈ ಟ್ರೆಕ್ಕಿಂಗ್ ನಲ್ಲಿ ಪೊಲೀಸರು ಬಂಡೆಗಳ ಮೇಲೆ ಕೂತು ಕಾಲ ಕಳೆದರು. ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎ. ಜಿ. ಕಾರಿಯಪ್ಪ ತೀರ್ಥಹಳ್ಳಿ ಡಿವೈಎಸ್ಪಿ ಅರವಿಂದ್ ಕಲಗುಜ್ಜಿ, ಶಿಕಾರಿಪುರ ಡಿವೈಎಸ್ಪಿ ಕೇಶವ್ ಸೇರಿದಂತೆ ತೀರ್ಥಹಳ್ಳಿ, ಶಿಕಾರಿಪುರ ಮತ್ತು ಸಾಗರ ಉಪ ವಿಭಾಗದ ಪೊಲೀಸ್ ಅಧಿಕಾರಿಗಳು ಚಾರಣದಲ್ಲಿ ಭಾಗಿಯಾಗಿದ್ದರು.