Poor Road Conditions : ರಸ್ತೆಯ ಮದ್ಯದಲ್ಲಿ ಸಸಿ ನೆಟ್ಟ ವಿದ್ಯಾರ್ಥಿಗಳು : ಕಾರಣವೇನು
Poor Road Conditions : ಶಿವಮೊಗ್ಗ : ಶಿವಮೊಗ್ಗ ತಾಲ್ಲೂಕಿನ ಕುಂಸಿ ಹೋಬಳಿಯ ತುಪ್ಪೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಣೆ ಹೊಸೂರು ಗ್ರಾಮದಲ್ಲಿ ರಸ್ತೆಗಳ ತೀವ್ರ ಅವ್ಯವಸ್ಥೆಯಿಂದ ಬೇಸತ್ತ ವಿದ್ಯಾರ್ಥಿಗಳು, ವಿನೂತನ ಪ್ರತಿಭಟನೆ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹದಗೆಟ್ಟ ಮಣ್ಣಿನ ರಸ್ತೆಯ ಗುಂಡಿಗಳಲ್ಲಿ ಸಸಿಗಳನ್ನು ನೆಡುವ ಮೂಲಕ, ಕೂಡಲೇ ರಸ್ತೆ ದುರಸ್ತಿ ಕಾರ್ಯಕ್ಕೆ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಆಗ್ರಹಿಸಿದ್ದಾರೆ.
ಕೋಣೆ ಹೊಸೂರು ಗ್ರಾಮದ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ಶಾಲೆ, ಕಾಲೇಜು, ಪೇಟೆ ಪಟ್ಟಣ, ಆಸ್ಪತ್ರೆಗಳಿಗೆ ತೆರಳುವ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ದೈನಂದಿನ ಪ್ರಯಾಣ ಕಷ್ಟಕರವಾಗಿದೆ. ರಸ್ತೆ ಪೂರ್ಣ ಪ್ರಮಾಣದಲ್ಲಿ ಕೆಸರು ಮಯವಾಗಿದ್ದು, ಇದರಿಂದ ಅಪಘಾತಗಳ ಭೀತಿ ಕೂಡ ಹೆಚ್ಚಾಗಿದೆ.
ಈ ಕುರಿತು ಮಾತನಾಡಿದ ಕೋಣೆ ಹೊಸೂರಿನ ಗ್ರಾಮಸ್ಥರಾದ ರಾಘವೇಂದ್ರ ಬಿದರಮಟ್ಟಿ, ದಯವಿಟ್ಟು ಇದಕ್ಕೆ ಸಂಬಂಧಪಟ್ಟ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು, ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತ್ ಸದಸ್ಯರುಗಳು ರಸ್ತೆ ದುರಸ್ತಿ ಕಾರ್ಯವನ್ನು ಮಾಡಿ ಕೊಡಬೇಕು” ಎಂದು ಮನವಿ ಮಾಡಿಕೊಂಡರು.


