ಶಿವಮೊಗ್ಗ: ಜಿಲ್ಲೆಯ ನಿರುದ್ಯೋಗಿ ಯುವಕ-ಯುವತಿಯರಿಗೆ ಅಂಚೆ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದೆ. ಶಿವಮೊಗ್ಗ ಅಂಚೆ ವಿಭಾಗದಲ್ಲಿ ಖಾಲಿ ಇರುವ ಶಾಖಾ ಅಂಚೆಪಾಲಕ (BPM), ಸಹಾಯಕ ಅಂಚೆಪಾಲಕ (ABPM) ಮತ್ತು ಡಾಕ್ ಸೇವಕ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಒಟ್ಟು 57 ಹುದ್ದೆಗಳಿಗೆ ಆನ್‌ಲೈನ್ ಮೂಲಕ ನೇಮಕಾತಿ ನಡೆಯಲಿದ್ದು, ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಬದಲಾಗಿ ಹತ್ತನೇ ತರಗತಿಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Post Office Recruitment 2026 ಅರ್ಹತೆಗಳು
ವಿದ್ಯಾರ್ಹತೆ: 10ನೇ ತರಗತಿ ತೇರ್ಗಡೆ ಕಡ್ಡಾಯ.
ಭಾಷೆ: 10ನೇ ತರಗತಿಯಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು. ಗಣಿತ ಮತ್ತು ಇಂಗ್ಲಿಷ್‌ನಲ್ಲಿ ಕನಿಷ್ಠ ತೇರ್ಗಡೆ ಅಂಕ ಹೊಂದಿರಬೇಕು.
ವಯೋಮಿತಿ: 18 ರಿಂದ 40 ವರ್ಷ. (ಮೀಸಲು ವರ್ಗದವರಿಗೆ ನಿಯಮಾನುಸಾರ ವಯೋಮಿತಿ ಸಡಲಿಕೆ ಇರುತ್ತದೆ).
ನೋಂದಣಿಗೆ ಫೆಬ್ರವರಿ 14 ಕೊನೆಯ ದಿನವಾಗಿದ್ದು, ಅರ್ಜಿ ಸಲ್ಲಿಸಲು ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಸಲು: ಫೆಬ್ರವರಿ 16, ಕಡೆಯ ದಿನವಾಗಿದೆ
ಅರ್ಜಿ ಸಲ್ಲಿಸುವ ವಿಧಾನ: ಆಸಕ್ತರು https://indiapost.gov.in/gdsonlineengagement ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಶಿವಮೊಗ್ಗ ವಿಭಾಗದ ಅಂಚೆ ಅಧೀಕ್ಷಕರ ಕಚೇರಿಯ ದೂರವಾಣಿ ಸಂಖ್ಯೆ 08182-222835 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Post Office Recruitment 2026 57 GDS Vacancies



