ಶಿವಮೊಗ್ಗ ಅಂಚೆ ವಿಭಾಗದಲ್ಲಿ ನೇರ ಪ್ರತಿನಿಧಿಗಳ ನೇಮಕಾತಿ! ನೇರ ಸಂದರ್ಶನ !ಇಲ್ಲಿದೆ ಮಾಹಿತಿ

ಹಂಚಿಕೊಳ್ಳಿ
WhatsApp Facebook X Telegram
Shivamogga malenadu toda image
Shivamogga

Walk-in Interview / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಶಿವಮೊಗ್ಗ ಅಂಚೆ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದರ ನೇರ ಸಂದರ್ಶನ ಆಗಸ್ಟ್ 13 ಮತ್ತು 14 ರಂದು ಬೆಳಿಗ್ಗೆ 11 ಗಂಟೆಗೆ ಅಂಚೆ ಅಧೀಕ್ಷಕರ ಕಚೇರಿ, ಕೋಟೆ ರಸ್ತೆ, ಶಿವಮೊಗ್ಗ ವಿಭಾಗ, ಶಿವಮೊಗ್ಗ-2ರಲ್ಲಿ ನಡೆಯಲಿದೆ ಎಂದುಪ್ರಕಟಣೆ ನೀಡಲಾಗಿದೆ.

  • ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರ, ಸ್ವವಿವರ ಹಾಗೂ ಶೈಕ್ಷಣಿಕ ಪ್ರಮಾಣಪತ್ರಗಳ ನಕಲುಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.
  • ಅಭ್ಯರ್ಥಿಗಳು ಕಡ್ಡಾಯವಾಗಿ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರಬೇಕು. ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಗರಿಷ್ಠ ವಯೋಮಿತಿ ಇರುವುದಿಲ್ಲ.
  • ನಿರುದ್ಯೋಗಿ ಹಾಗೂ ಸ್ವಯಂ ಉದ್ಯೋಗ ನಿರತ ಯುವಕರು, ವಿಮಾ ಕಂಪನಿಗಳ ಮಾಜಿ ಏಜೆಂಟರು ಮತ್ತು ಸಲಹೆಗಾರರು, ಮಾಜಿ ಸೈನಿಕರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಮಂಡಳದ ಕಾರ್ಯಕರ್ತೆಯರು, ನಿವೃತ್ತ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರು ಸೇರಿದಂತೆ ಅರ್ಹ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.
  • ಸಂವಹನ ಕೌಶಲ್ಯ ಹಾಗೂ ವಿಮಾ ಮಾರಾಟ ಕ್ಷೇತ್ರದಲ್ಲಿ ಪೂರ್ವಾನುಭವ ಹೊಂದಿರುವವರಿಗೆ ವಿಶೇಷ ಆದ್ಯತೆ ಇರುತ್ತದೆ.
  • ಆಯ್ಕೆಯಾದ ಅಭ್ಯರ್ಥಿಗಳು ರೂ.5,000 ಮೌಲ್ಯದ ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ ಪತ್ರದ ರೂಪದಲ್ಲಿ ಭದ್ರತಾ ಠೇವಣಿ ಇಡಬೇಕಾಗುತ್ತದೆ.

ಆಯ್ಕೆಯಾದ ನೇರ ಪ್ರತಿನಿಧಿಗಳಿಗೆ ಅವರು ಮಾಡಿದ ವ್ಯವಹಾರದ ಆಧಾರದ ಮೇಲೆ ಇಲಾಖೆಯ ನಿಯಮಾನುಸಾರ ಪ್ರೋತ್ಸಾಹಧನ ನೀಡಲಾಗುವುದು. ಟಿಎ/ಡಿಎ ಸೇರಿದಂತೆ ಇತರೆ ಯಾವುದೇ ಭತ್ಯೆ ನೀಡಲಾಗುವುದಿಲ್ಲ.ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳಿಗೆ ಯಾವುದೇ ಭತ್ಯೆ ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಅಂಚೆ ಜೀವ ವಿಮಾ ಅಭಿವೃದ್ಧಿ ಅಧಿಕಾರಿಗಳು, ದೂ.ಸಂ: 9036842084 ನ್ನು ಸಂಪರ್ಕಿಸಬಹುದು ಎಂದು ಅಂಚೆ ಅಧೀಕ್ಷಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor