ಶಿವಮೊಗ್ಗ : ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-04 ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.23 ರಂದು ಬೆಳಗ್ಗೆ 10.00 ರಿಂದ ಸಂಜೆ 5.00ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.
Power cut ಎಲ್ಲೆಲ್ಲಿ ಕರೆಂಟ್ ಇರಲ್ಲ
ಅಮೃತ ಲೇಔಟ್, ಸಿಟಿ ಕ್ಲಬ್, ಮಹೇಂದ್ರ ಶೋರೂಂ ಮುಖ್ಯರಸ್ತೆ, ಗಾಡಿಕೊಪ್ಪ, ಶರಾವತಿ ಡೆಂಟಲ್ ಕಾಲೇಜು, ಹರ್ಷ ಫರ್ನ್ ಸುತ್ತಮುತ್ತ, ಮಲ್ಲಿಗೇನಹಳ್ಳಿ, ಎಬಿವಿಪಿ ಲೇಔಟ್, ಮ್ಯಾಕ್ಷ್ ಅರುಣೋದಯ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.