ಶಿವಮೊಗ್ಗ ಗ್ರಾಮೀಣ ಭಾಗದಲ್ಲಿ ಈ ದಿನ ಕರೆಂಟ್​​ ಇರಲ್ಲ 

ಹಂಚಿಕೊಳ್ಳಿ
WhatsApp Facebook X Telegram
Shivamogga Power Cut
Shivamogga Power Cut

ಶಿವಮೊಗ್ಗ,: ಜಿಲ್ಲೆಯ ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ವಿವಿಧ ಹಳ್ಳಿಗಳು ಹಾಗೂ ಪ್ರಮುಖ ಬಡಾವಣೆಗಳಲ್ಲಿ ಮೇ 26 ರಂದು ಇಡೀ ದಿನ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಶಿವಮೊಗ್ಗದ ಎಂ.ಆರ್.ಎಸ್ 220 ಕೆವಿ ಪ್ರಮುಖ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತುರ್ತು ತ್ರೈಮಾಸಿಕ ತಾಂತ್ರಿಕ ನಿರ್ವಹಣಾ ಕಾರ್ಯಗಳನ್ನು ಹಮ್ಮಿಕೊಂಡಿರುವುದೇ ಇದಕ್ಕೆ ಪ್ರಮುಖ ಕಾರಣ ಎಂದು ತಿಳಿದುಬಂದಿದೆ.

ಶಿವಮೊಗ್ಗದಲ್ಲಿ ಇವತ್ತು ಏನೆಲ್ಲಾ ನಡೀತು ಇ-ಪೇಪರ್​ ಓದಿ

Power Cut Alert ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು

ಮೆಸ್ಕಾಂ ಪ್ರಕಟಣೆಯ ಪ್ರಕಾರ, ಮಾಚೇನಹಳ್ಳಿ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯ ಲೈನ್‌ಗಳಲ್ಲಿ ದುರಸ್ತಿ ಕಾರ್ಯ ನಡೆಯಲಿದ್ದು, ಮೇ 26 ರ ಮಂಗಳವಾರ ಬೆಳಿಗ್ಗೆ 9.30 ರಿಂದ ಸಂಜೆ 5.00 ರವರೆಗೆ ಕರೆಂಟ್ ಇರುವುದಿಲ್ಲ. ಈ ಅವಧಿಯಲ್ಲಿ ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿಗ್ರಾಮ, ಹೊನ್ನವಿಲೆ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಸಂಪೂರ್ಣ ವಿದ್ಯುತ್ ಕಡಿತಗೊಳ್ಳಲಿದೆ. 

ಕೇವಲ ಗ್ರಾಮೀಣ ಪ್ರದೇಶಗಳಷ್ಟೇ ಅಲ್ಲದೆ ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೊನಿಕ್ಸ್ ಐ.ಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ ಕಾಲೋನಿ, ನವುಲೆಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲೂ ವಿದ್ಯುತ್​ ವ್ಯತ್ಯಯವಾಗಲಿದೆ.

Power Cut Alert Area List for May 26

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor