ಶಿವಮೊಗ್ಗದ ಈ ಭಾಗಗಳಲ್ಲಿ ಫೆಬ್ರವರಿ 7 ರಂದು ಕರೆಂಟ್ ಇರಲ್ಲ

This Article Written by / Prathapa thirthahalli / ಫೆಬ್ರವರಿ 2, 2026

Power Cut Alert Mescom power cut Mescom No Online Services for 2 days  power cut tomorrow shivamogga

ಶಿವಮೊಗ್ಗ: ನಗರದ ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ, ಫೆಬ್ರವರಿ 07 ರಂದು ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಪಿಳ್ಳಂಗಿರಿ ಮತ್ತು ಜಾವಳ್ಳಿ ಐ.ಪಿ. ಮಾರ್ಗಗಳಲ್ಲಿ ತ್ರೈಮಾಸಿಕ ಕಾಮಗಾರಿ ನಡೆಯಲಿದ್ದು, ಗ್ರಾಹಕರು ಮುಂಜಾಗ್ರತಾ ಕ್ರಮವಾಗಿ ಸಹಕರಿಸಬೇಕೆಂದು ಮೆಸ್ಕಾಂ ತಿಳಿಸಿದೆ.

ಶಿವಮೊಗ್ಗ, ಭದ್ರಾವತಿಯಲ್ಲಿ ಶಾಲಾ ಮಕ್ಕಳು ಅಸ್ವಸ್ಥ! ಆಗಿದ್ದೇನು? ಸಿಇಒ ಹೇಮಂತ್ ಏನಂದ್ರು

ಅಂದು ಬೆಳಗ್ಗೆ 9:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ ಹಾಗೂ ಅಬ್ಬರಘಟ್ಟ ಗ್ರಾಮಗಳಲ್ಲಿ ವಿದ್ಯುತ್ ಇರುವುದಿಲ್ಲ. ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ ಹಾಗೂ ಗೌಡನಾಯ್ಕನಹಳ್ಳಿ ಭಾಗದ ಜನರಿಗೂ ಈ ಪವರ್ ಕಟ್ ಬಿಸಿ ತಟ್ಟಲಿದೆ.

ಇದಲ್ಲದೆ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರ ಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್ ಮತ್ತು ಚಿಕ್ಕಮಟ್ಟಿ ಗ್ರಾಮಗಳಲ್ಲೂ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ. ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಹಾಗೂ ಈ ಸುತ್ತಮುತ್ತಲಿನ ಎಲ್ಲಾ ಪ್ರದೇಶಗಳಲ್ಲಿ  ವಿದ್ಯುತ್​ ವ್ಯತ್ಯಯವಾಗಲಿದೆ. 

Power Cut Alert Electricity Supply Interrupted

Power Cut Alert Mescom power cut Mescom No Online Services for 2 days  power cut tomorrow shivamogga
Power Cut Alert Mescom power cut power cut tomorrow shivamogga

This Article Written by / Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Malenadu Today News,MESCOM Maintenance,Shivamogga power cut

ಮುಂದಿನ ಸುದ್ದಿ ಒದಿ