ಶಿವಮೊಗ್ಗದ ಈ 20ಕ್ಕೂ ಹೆಚ್ಚು ಗ್ರಾಮಗಳಲ್ಲಿ ಜೂನ್ 6 ರಂದು ದಿನವಿಡೀ ವಿದ್ಯುತ್ ವ್ಯತ್ಯಯ

ಹಂಚಿಕೊಳ್ಳಿ
WhatsApp Facebook X Telegram
Shivamogga Power Cut
Shivamogga Power Cut

ಶಿವಮೊಗ್ಗ: ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇ ತ್ರೈಮಾಸಿಕ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್ 6 ರ ಶನಿವಾರದಂದು ವಿವಿಧ ಗ್ರಾಮಗಳಲ್ಲಿ ಬೆಳಗ್ಗಿನಿಂದ ಸಂಜೆಯವರೆಗೆ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಲಾಗುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಶಿವಮೊಗ್ಗದ ಎಂ.ಆರ್.ಎಸ್ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಅತ್ಯಗತ್ಯ ದುರಸ್ತಿ ಹಾಗೂ ನವೀಕರಣ ಕೆಲಸಗಳು ನಡೆಯಲಿವೆ. ಈ ಕಾರಣದಿಂದಾಗಿ ಜೂನ್ 6 ರಂದು ಬೆಳಗ್ಗೆ 9.00 ಗಂಟೆಯಿಂದ ಸಂಜೆ 6.00 ಗಂಟೆಯವರೆಗೆ ಎಫ್‌-7 ಪಿಳ್ಳಂಗಿರಿ ಎನ್.ಜೆ.ವೈ ಮತ್ತು ಎಫ್‌-8 ಜಾವಳ್ಳಿ ಐ ಪಿ ಮಾರ್ಗಗಳಲ್ಲಿ ವಿದ್ಯುತ್ ಸಂಪರ್ಕ ಇರುವುದಿಲ್ಲ.

ವಿದ್ಯುತ್ ವ್ಯತ್ಯಯವಾಗಲಿರುವ ಗ್ರಾಮಗಳು

ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೇನವಳ್ಳಿ, ಹಾರೋಬೇನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಹಾಗೂ ಇವುಗಳ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಶನಿವಾರ ದಿನವಿಡೀ ಪವರ್ ಕಟ್ ಇರಲಿದೆ. ದೀರ್ಘಾವಧಿಯ ಈ ವಿದ್ಯುತ್ ಕಡಿತಕ್ಕೆ ಗ್ರಾಹಕರು ಮತ್ತು ರೈತರು ಮೆಸ್ಕಾಂ ಸಿಬ್ಬಂದಿಯೊಂದಿಗೆ ಸಹಕರಿಸಬೇಕಾಗಿ ಕೋರಲಾಗಿದೆ.

Power Cut Areas Facing Outage on June 6

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor