ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ಬೆಳಿಗ್ಗೆ 6 ರಿಂದ 10 ರವರೆಗೆ ವಿದ್ಯುತ್​ ವ್ಯತ್ಯಯ

ಹಂಚಿಕೊಳ್ಳಿ
WhatsApp Facebook X Telegram
Shivamogga Power Cut
Shivamogga Power Cut

ಶಿವಮೊಗ್ಗ: ಶಿವಮೊಗ್ಗ ನಗರದ ಪ್ರಮುಖ ರಸ್ತೆ ಹಾಗೂ ಬಡಾವಣೆಗಳ ವ್ಯಾಪ್ತಿಯಲ್ಲಿ ತುರ್ತು ನವೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬುಧವಾರ ಬೆಳಗಿನ ಜಾವ ಕೆಲವು ಗಂಟೆಗಳ ಕಾಲ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ  ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ

ಮೆಸ್ಕಾಂ ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ, ಶಿವಮೊಗ್ಗ ನಗರ ಉಪವಿಭಾಗ-2ರ ಘಟಕ-5ರ ವ್ಯಾಪ್ತಿಗೆ ಬರುವ ಬಿ.ಹೆಚ್. ರಸ್ತೆಯಲ್ಲಿ ಅತ್ಯಗತ್ಯ ತುರ್ತು ರಿಪೇರಿ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಕಾರಣದಿಂದಾಗಿ ಜೂನ್ 03 ರಂದು ಬೆಳಗ್ಗೆ 6.00 ಗಂಟೆಯಿಂದ 10.00 ಗಂಟೆಯವರೆಗೆ ಭಾರತಿ ಕಾಲೋನಿ, ಪಂಚವಟಿ ಕಾಲೋನಿ, ಬಿ.ಹೆಚ್. ರಸ್ತೆ, ಎನ್.ಟಿ. ರಸ್ತೆ, ಜೆ.ಸಿ. ನಗರ ಹಾಗೂ ಇವುಗಳ ಸುತ್ತಮುತ್ತಲಿನ ನಿವಾಸಿಗಳಿಗೆ ವಿದ್ಯುತ್ ಸಂಪರ್ಕ ಇರುವುದಿಲ್ಲ.

Power Cut Electricity Interruption on BH Road

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor