Power Cut in Shimoga Today and Tomorrow | Shimoga | ಮೆಸ್ಕಾಂ ಶಿವಮೊಗ್ಗ ಇವತ್ತು ನಾಳೆ ಶಿವಮೊಗ್ಗದ ವಿವಿದ ಕಡೆಗಳಲ್ಲಿ ಕರೆಂಟ್ ಇರಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ನಗರದಲ್ಲಿ ವಿದ್ಯುತ್ ಸರಬರಾಜು ಜಾಲದ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ನಗರದ ಪ್ರಮುಖ ಬಡಾವಣೆಗಳಲ್ಲಿ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಶಿವಮೊಗ್ಗ ನಗರ ಉಪವಿಭಾಗ 2ರ ವ್ಯಾಪ್ತಿಗೆ ಒಳಪಡುವ ಮಂಡ್ಲಿ ಭಾಗದಲ್ಲಿ ದುರಸ್ತಿ ಕಾರ್ಯ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸಂಪರ್ಕ ಕಡಿತಗೊಳ್ಳಲಿದೆ ಎಂದು ಮೆಸ್ಕಾಂ ಇಲಾಖೆಯು ತನ್ನ ಅಧಿಕೃತ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಸಂಸದರ ಸಂವಾದ! ಈಶ್ವರಪ್ಪನವರ ಆಕ್ರೋಶ! ಶಿವಮೊಗ್ಗ ಪತ್ರಿಕಾಭವನದಲ್ಲಿ? ಇವತ್ತಿನ ಇ-ಪೇಪರ್ ಓದಿ
ಎಲ್ಲೆಲ್ಲಿ ಕರೆಂಟ್ ಇರಲ್ಲ
ಪೇಪರ್ ಪ್ಯಾಕ್ಟರಿ, ಅರಮನೆ ಹೋಟೆಲ್, ಹಳೇ ಮಂಡ್ಲಿ, ಗಂಧರ್ವನಗರ ಹಾಗೂ ಹರಕೆರೆ, ಶಂಕರ ಕಣ್ಣಿನ ಆಸ್ಪತ್ರೆ ಮತ್ತು ವಿಜಯವಾಣಿ ಪ್ರೆಸ್ ಸುತ್ತಮುತ್ತಲಿನ ಪ್ರದೇಶಗಳು, ಸವಾಯಿ ಪಾಳ್ಯ, ಕುರುಬರ ಪಾಳ್ಯ, ಶ್ರೀನಿವಾಸ ಲೇಔಟ್ ಮತ್ತು ಇಲಿಯಾಜ್ ನಗರದ 1 ರಿಂದ 4ನೇ ಕ್ರಾಸ್‌ವರೆಗಿನ ಬಡಾವಣೆಗಳಲ್ಲಿಯೂ ವಿದ್ಯುತ್ ಇರುವುದಿಲ್ಲ. ಹಾಗೆಯೇ ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‌ಮಿಲ್, ಬೆನಕೇಶ್ವರ ರೈಸ್ ಮಿಲ್, ಅನ್ನಪೂರ್ಣೇಶ್ವರಿ ಬಡಾವಣೆಗಳಲ್ಲಿಯೂ ಸಹ ಪವರ್ ಕಟ್ ಇರಲಿದೆ. ಇದರೊಂದಿಗೆ ಗ್ರಾಮಾಂತರ ಪ್ರದೇಶಗಳಾದ ಗಾಜನೂರು, ರಾಮಿನಕೊಪ್ಪ ಹಾಗೂ ಮಲ್ನಾಡ್ ಕೊಕೊ ಮತ್ತು ಈ ಭಾಗದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ಅಡಚಣೆ ಉಂಟಾಗಲಿದೆ.
ಇನ್ನೂ ಇತ್ತ ಎಂ.ಆರ್.ಎಸ್. 220 ಕೆವಿ.ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿದ್ದು, ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಜ. 17 ರಂದು ಬೆಳಗ್ಗೆ 9.30 ರಿಂದ ಸಂಜೆ 4.00 ರವರೆಗೆ ಕರೆಂಟ್ ಇರಲ್ಲ ಎಂದು ಮೆಸ್ಕಾಂ ತಿಳಿಸಿದೆ.
ಯಾವ ಭಾಗದಲ್ಲಿ ಕರೆಂಟ್ ಇರಲ್ಲ
ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿಗ್ರಾಮ, ಹೊನ್ನವಿಲೆ, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ ಕಾಲೋನಿ, ನವುಲೆ ಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ನಾಳೆ ಇಲ್ಲೆಲ್ಲಾ ಕರೆಂಟ್ ಇರಲ್ಲ
ಶಿವಮೊಗ್ಗ ಆಲ್ಕೋಳ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿದ್ದು, ಈ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಜ. 18 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಕೆಳಕಂಡ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ ಎಂದು ಮೆಸ್ಕಾಂ ತಿಳಿಸಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ/Power Cut in Shimoga Today and Tomorrow
ಗಾಂಧಿನಗರ, ರವೀಂದ್ರನಗರ, ವೆಂಕಟೇಶನಗರ, ಚೆನ್ನಪ್ಪ ಲೇಔಟ್, ಉಷಾ ನರ್ಸಿಂಗ್ ಹೋಮ್, ಜೈಲ್ ರಸ್ತೆ, ರಾಜೇಂದ್ರನಗರ, ಎ.ಎನ್.ಕೆ. ರಸ್ತೆ, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, ವಿನೋಬನಗರ 60 ಅಡಿರಸ್ತೆ, ಜೈಲ್ ಸರ್ಕಲ್, ಆಟೋಕಾಂಪ್ಲೆಕ್ಸ್, ಪೊಲೀಸ್ ಚೌಕಿ, ಮೇಧಾರ ಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೇಔಟ್, ಮೈತ್ರಿ ಅಪಾರ್ಟ್ಮೆಂಟ್, ಕನಕನಗರ, ದೇವರಾಜ್ ಅರಸ್ ಬಡಾವಣೆ, ಇ&ಟಿ ಕಾಲೋನಿ, ಸೂರ್ಯ ಲೇಔಟ್, ಅರವಿಂದನಗರ, ಇಂಡಸ್ಟ್ರೀಯಲ್ ಏರಿಯಾ, ಎಪಿಎಂಸಿ, ವೀರಣ್ಣ ಲೇಔಟ್, ಕಾಶೀಪುರ, ಜಯದೇವ ಬಡಾವಣೆ, ಸಹ್ಯಾದ್ರಿನಗರ, ಸಹಕಾರಿನಗರ, ಆಲ್ಕೋಳ ವೃತ್ತ, ಸಾಗರರಸ್ತೆ,
ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸರ್ಕ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಲ್ ಹರೀಮ್ ಲೇಔಟ್, ವಿಜಯನಗರ, ಪಂಪನಗರ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಶ್ರೀರಾಮನಗರ, ಟಿಪ್ಪುನಗರ, ಪದ್ಮಾ ಟಾಕೀಸ್ ರಸ್ತೆ, ಸಿದ್ದೇಶ್ವರ ವೃತ್ತ, ಗೋಪಾಳಗೌಡ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಅಣ್ಣಾನಗರ, ರಂಗನಾಥ ಬಡಾವಣೆ, ಕೆ.ಹೆಚ್.ಬಿ.ಗೋಪಾಳ, ಜೆ.ಪಿ.ನಗರ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ನಂಜಪ್ಪ ಹೆಲ್ತ್ ಕೇರ್, ಶರಾವತಿ ದಂತ ವೈದ್ಯಕೀಯ ಕಾಲೇಜು, ಮಲ್ಲಿಗೆನಹಳ್ಳಿ, ಸೋಮಿನಕೊಪ್ಪ ಪ್ರೆಸ್ ಕಾಲೋನಿ, ಭೈರನಕೊಪ್ಪ, ಎ.ಪಿ.ಎಂ.ಸಿ ಲೇಔಟ್, (ಆಶ್ರಯ ಬಡಾವಣೆ), ಭೋವಿ ಕಾಲೋನಿ,
ಆಲದೇವರಹೊಸೂರು, ಶಕ್ತಿಧಾಮ
ಆಲದೇವರಹೊಸೂರು, ಶಕ್ತಿಧಾಮ, ಶಿವಸಾಯಿ ಕಾಸ್ಟಿಂಗ್, ಗೆಜ್ಜೆನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಂಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟ್ರೀ, ಪೆಸೆಟ್ ಕಾಲೇಜ್, ಕೋಟೆಗಂಗೂರು, ಗೆಜ್ಜೇನಹಳ್ಳಿ, ಬಸವಗಂಗೂರು, ಸೋಮಿನಕೊಪ್ಪ, ಆದರ್ಶನಗರ, ಸಹ್ಯಾದ್ರಿನಗರ, ಜೆ,ಹೆಚ್.ಪಟೇಲ್ ಬಡಾವಣೆ, ಕಾಶೀಪುರ, ಕಲ್ಲಹಳ್ಳಿ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾಗಾAಧಿ ಲೇಔಟ್ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.
