ಸುದ್ದಿಯ ಸ್ಥಳ: Shivamogga district, Karnataka
ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಶಿವಮೊಗ್ಗ ನಗರ ಮೆಸ್ಕಾಂ ಉಪ ವಿಭಾಗ-3ರ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-11 ರಲ್ಲಿ ನ.19 ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ,
ಎಲ್ಲೆಲ್ಲಿ ಕರೆಂಟ್ ಇರಲ್ಲ
ಅರವಿಂದನಗರ, ಸೂರ್ಯ ಲೇಔಟ್, ದೇವರಾಜ್ ಅರಸ್ ಬಡಾವಣೆ, ದೂರವಾಣಿ ಬಡಾವಣೆ, ಕನಕನಗರ, ಶಾರದಮ್ಮ ಲೇಔಟ್, ಜಿ.ಎಸ್. ಶಿವರುದ್ರಪ್ಪ ಲೇಔಟ್ ಮತ್ತು ಮೈತ್ರಿ ಅಪಾರ್ಟ್ಮೆಂಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
