POWER CUT TODAY

ಶಿವಮೊಗ್ಗ:  ಎರಡು ದಿನ ಬೆಳಿಗ್ಗೆಯಿಂದ ಮದ್ಯಾಹ್ನದವರೆಗೆ ಕರೆಂಟ್​​ ಇರಲ್ಲ. ಎಲ್ಲಿ, ಯಾವಾಗ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ: ನಗರದ ಮೆಸ್ಕಾಂ ಉಪವಿಭಾಗ-1 ಹಾಗೂ ಘಟಕ-2ರ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಾಳೆ ಮತ್ತು ನಾಡಿದ್ದು (ಮೇ 07 ಮತ್ತು 08) ವಿವಿಧ ಬಡಾವಣೆಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ವಿದ್ಯುತ್ ಕಂಬಗಳ ತೆರವು ಕಾರ್ಯದ ಹಿನ್ನೆಲೆಯಲ್ಲಿ ಈ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಜೂನ್ ಮೊದಲ ವಾರದಲ್ಲಿ , ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಬಿಗ್​ ಅಪ್​ಡೇಟ್

ಮೇ 07 ಮತ್ತು 08 ರಂದು ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 2:00 ಗಂಟೆಯವರೆಗೆ ವಿದ್ಯುತ್ ಸಂಪರ್ಕ ಕಡಿತಗೊಳ್ಳಲಿದೆ. ಈ ಅವಧಿಯಲ್ಲಿ ಅಚ್ಯುತ್ ರಾವ್ ಲೇಔಟ್, ಜೈಲ್ ರಸ್ತೆ, ವೆಂಕಟೇಶನಗರ, ಗಾಂಧಿನಗರ, ಚನ್ನಪ್ಪ ಲೇಔಟ್ ಹಾಗೂ ಈ ಪ್ರದೇಶಗಳ ಸುತ್ತಮುತ್ತಲಿನ ಸ್ಥಳಗಳಲ್ಲಿ ಪವರ್ ಕಟ್ ಇರಲಿದೆ. ಕಾಮಗಾರಿ ನಡೆಯುವ ಸಮಯದಲ್ಲಿ ಸಾರ್ವಜನಿಕರು ಹಾಗೂ ಗ್ರಾಹಕರು ಸಹಕರಿಸಬೇಕೆಂದು ಮೆಸ್ಕಾಂ ಇಲಾಖೆ ಮನವಿ ಮಾಡಿದೆ. 

Power Cut in Shivamogga on May 7 & 8

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.