ಸಾರ್ವಜನಿಕರ ಗಮನಕ್ಕೆ | 14 ನೇ ತಾರೀಖು ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ಪವರ್​ ಕಟ್

ಹಂಚಿಕೊಳ್ಳಿ
WhatsApp Facebook X Telegram

ಶಿವಮೊಗ್ಗ :  ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಕಂಬ ಸ್ಥಳಾಂತರ ಕಾಮಗಾರಿಯನ್ನು ಮೆಸ್ಕಾಂ ಕೈಗೆತ್ತಿಕೊಂಡಿದೆ. ಈ ಹಿನ್ನೆಲೆಯಲ್ಲಿ ಈ ಪ್ರದೇಶದ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿ ಇದೇ 14/12/20222 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. 

ಇದನ್ನು ಸಹ ಓದಿ : ಶಿರಾಳಕೊಪ್ಪ | ಆಸ್ತಿ ಕೊಡದ ಅಪ್ಪ ಮತ್ತೊಂದು ಮದುವೆಯಾದ, ಸಿಟ್ಗಿಗೆದ್ದ ಮಕ್ಕಳು ಸುಪಾರಿ ಕೊಟ್ಟು ತಂದೆಯನ್ನೆ ಕೊಂದರು

ಎಲ್ಲೆಲ್ಲಿ ಇರೋದಿಲ್ಲ ಕರೆಂಟ್​ !

ಈ ಪ್ರದೇಶದ ವ್ಯಾಪ್ತಿಗೊಳಪಡುವ ಪ್ರದೇಶಗಳಲ್ಲಿ ನಿಂಗಪ್ಪ ಲೇಔಟ್, ಸೂಳೆಬೈಲು, ಊರಗಡೂರು, ಮಳಲಿಕೊಪ್ಪ, ಇಂದಿರಾನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಿ: 14/12/20222 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಈ ಸಂಬಂಧ , ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‍ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನು ಸಹ ಕ್ಲಿಕ್ ಮಾಡಿ : ಜಿ20 ಸಭೆಗಾಗಿ ಬೆಂಗಳೂರಿನಲ್ಲಿ ಬೀಡುಬಿಟ್ಟ ಸಕ್ರೆಬೈಲ್​ನ ಜೋಡಿ ಆನೆಗಳು | ಏನಿದು ವಿಶೇಷ ಗೊತ್ತಾ | Exclusive

ಅರ್ಜಿ ಸಲ್ಲಿಕೆ- ಅವಧಿ ವಿಸ್ತರಣೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಹಾಗೂ ಪ್ರವರ್ಗ-1 ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ 2022-23ನೇ ಸಾಲಿನ ಇಲಾಖೆಯ ಮೆಟ್ರಿಕ್ ನಂತರದ (ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸ್‍ಗಳ ವಿದ್ಯಾರ್ಥಿಗಳು) ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಕಲ್ಪಿಸಲು ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಡಿ. 22 ರವರೆಗೆ ವಿಸ್ತರಿಲಾಗಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇದನ್ನು ಸಹ ಓದಿ :ಅಡಿಕೆ ದರ ಕ್ವಿಂಟಾಲ್​ಗೆ 20 ಸಾವಿರ ಕಡಿಮೆಯಾಗಲು ಬಿಜೆಪಿ ಕಾರಣ? | ಗುಟ್ಕಾ ವ್ಯಾಪಾರಸ್ಥರ ಪರ ನಿಂತ ಮೋದಿ ಸರ್ಕಾರ | ಕಾಂಗ್ರೆಸ್​ ಆರೋಪವೇನು

ಅರ್ಜಿ ಸಲ್ಲಿಸಲು ವೆಬ್‍ಸೈಟ್ https://shp.karnataka.gov.in  /  https://bcwd.karantaka.gov.in ಗಳನ್ನು ಬಳಸುವುದು ಹಾಗೂ ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 8050770006/28182-222129/080-35254757 ನ್ನು ಸಂಪರ್ಕಿಸುವಬಹುದಾಗಿದೆ. 

ಮತ್ತಷ್ಟು ಸುದ್ದಿಗಳಿಗಾಗಿ ನಮ್ಮ ವಾಟ್ಸ್ಯಾಪ್​ ಗ್ರೂಪ್​ನ ಲಿಂಕ್​ಗೆ ಕ್ಲಿಕ್ ಮಾಡಿ :  Whatsapp link

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor