ನಾಳೆ ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್/ ಎಲ್ಲೆಲ್ಲಿ ಎನ್ನುವ ವಿವರ ಇಲ್ಲಿದೆ

ಶಿವಮೊಗ್ಗ ಮೆಸ್ಕಾಂ ವಿಭಾಗವೂ ಇದೇ ಡಿಸೆಂಬರ್ ಏಳರಂದು ಅಂದರೆ ನಾಳೆ ವಿದ್ಯುತ್​ ವಿತರಣಾ ಕೇಂದ್ರಗಳಲ್ಲಿ ಕಾಮಗಾರಿಗಳನ್ನು ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಹೊಳೆಹೊನ್ನೂರು ಭಾಗ ಹಾಗೂ  ಉರಗಡೂರು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ. 

ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್​ಗೆ ಕ್ಲಿಕ್ ಮಾಡಿ  : Whatsapp link

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ

ಡಿಸೆಂಬರ್ 7 ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಹೊಳೆಹೊನ್ನೂರು 66/11 ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ. 

ಈ ಹಿನ್ನೆಲೆಯಲ್ಲಿ  ಎಫ್-2(ಹೊಳೆಹೊನ್ನೂರು)ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಪಡೆಯುವ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನು ಸಹ ಓದಿ : ಹಂದಿ ಅಣ್ಣಿ ಹತ್ಯೆಯ ಪ್ರಮುಖ ಆರೋಪಿ ಕಾಡಾ ಕಾರ್ತಿಗೆ ಆರು ತಿಂಗಳು ಶಿಕ್ಷೆ/ 2 ಸಾವಿರ ರೂಪಾಯಿ ದಂಡ

ಮಂಡ್ಲಿ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಡಿಸೆಂಬರ್ 07 ರಂದು ಕಂಬ ಸ್ಥಳಾಂತರ ಕಾಮಗಾರಿ ಕೈಗೊಳ್ಳಲಾಗುತ್ತಿದೆ, ಈ ಹಿನ್ನೆಲೆಯಲ್ಲಿ  ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದ ಊರಗಡೂರು ಫೀಡರ್-7 11 ಕೆ.ವಿ ಮಾರ್ಗಮುಕ್ತತೆ ನೀಡುವುದರಿಂದ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ನಿಂಗಪ್ಪ ಲೇಔಟ್, ಸೂಳೆಬೈಲು, ಊರಗಡೂರು, ಮಳಲಿಕೊಪ್ಪ, ಇಂದಿರಾನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್​ಗೆ ಕ್ಲಿಕ್ ಮಾಡಿ  : Whatsapp link

Leave a Comment