ಶಿವಮೊಗ್ಗ : ನಗರದ ಕುಂಸಿ ಉಪವಿಭಾಗದ ಹಾರನ ಹಳ್ಳಿ ಶಾಖಾ ವ್ಯಾಪ್ತಿಯಲ್ಲಿ ರಿ-ಕಂಡಕ್ಟರಿಂಗ್ ಕಾಮಗಾರಿ ಹಮ್ಮಿಕೊಂಡಿದ್ದು, ಜ. 20 ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಹಾರನಹಳ್ಳಿ, ಮೈಸವಳ್ಳಿ, ವೀರಣ್ಣನ ಬೆನವಳ್ಳಿ, ಎರೆಕೊಪ್ಪ, ಸೇವಾಲಾಲ್ ನಗರ, ನಾಗರಬಾವಿ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಜ. 21: ವಿದ್ಯುತ್ ಅದಾಲತ್ 2.
ಶಿವಮೊಗ್ಗ : ಶ್ರೀರಾಂಪುರ ಮೆಸ್ಕಾಂ ಶಾಖಾ ವ್ಯಾಪ್ತಿಯ ಕೋಟೆಗಂಗೂರು ಗ್ರಾಮದ ಗ್ರಾಮ ಪಂಚಾಯಿತಿಯ ಹತ್ತಿರವಿರುವ ಸಮುದಾಯ ಭವನದಲ್ಲಿ ಜ.21 ರ ಬೆಳಗ್ಗೆ 10:30 ಕ್ಕೆ ವಿದ್ಯುತ್ ಅದಾಲತ್ ನ್ನು ಹಮ್ಮಿಕೊಳ್ಳಲಾಗಿದೆ.ಕೋಟೆಗಂಗೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಗ್ರಾಹಕರು ವಿದ್ಯುತ್ ಸಂಪರ್ಕಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಅಹವಾಲನ್ನು ಸಲ್ಲಿಸುವಂತೆ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿರುತ್ತಾರೆ.
ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸುವ ಶಿವಮೊಗ್ಗ ವಿಮಾನ ನಿಲ್ದಾಣ ಹೇಗೆ ಸಿದ್ಧವಾಗಿದೆ ನೋಡಿ
ವಿದ್ಯುತ್ ಅದಾಲತ್
ಶಿವಮೊಗ್ಗ ಜನವರಿ 18 : ಶಿವಮೊಗ್ಗ ತಾಲ್ಲೂಕು ಮೆಸ್ಕಾಂ ಗ್ರಾಮೀಣ ಉಪವಿಭಾಗವು ಜ.21 ರ ಬೆಳಗ್ಗೆ 11 ಗಂಟೆಗೆ ಕುಂಚೇನಹಳ್ಳಿ ಗ್ರಾಮದ ಗ್ರಾಮಪಂಚಾಯಿತಿ ಕಚೇರಿಯಲ್ಲಿ ವಿದ್ಯುತ್ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಕುಂಚೇನಹಳ್ಳಿ ಗ್ರಾಮಪಂಚಾಯಿತಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಗ್ರಾಹಕರು ತಮ್ಮ ಕುಂದು ಕೊರತೆಗಳಿದ್ದಲ್ಲಿ ಕಾರ್ಯಕ್ರಮಕ್ಕೆ ಭಾಗವಹಿಸಿ ತಮ್ಮ ಅಹವಾಲನ್ನು ಸಲ್ಲಿಸುವಂತೆ ಗ್ರಾಮಾಂತರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪಾಲಾಕಿ.ಪಿ.ಹೆಚ್.ರವರು ತಿಳಿಸಿರುತ್ತಾರೆ.
ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು ಕ್ಲಿಕ್ ಮಾಡಿ
Facebook ನಲ್ಲಿ ನಮ್ಮ ಪೇಜ್ ನೋಡಿ : Malenadutoday.com
Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com
Instagram ನಲ್ಲಿ ಕ್ಲಿಕ್ ಮಾಡಿ : Malenadutoday.com
Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com