ಸೆಪ್ಟಂಬರ್​ 27 ರಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ

ajjimane ganesh

Power cut shivamogga :  ಸೆಪ್ಟಂಬರ್​ 27 ರಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 25, 2025, ಶಿವಮೊಗ್ಗ: ಶಿವಮೊಗ್ಗ ತಾಲ್ಲೂಕಿನ ಕುಂಸಿ ಮತ್ತು ಆಯನೂರು ಗ್ರಾಮಗಳಲ್ಲಿರುವ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ನಿರ್ವಹಣಾ ಹಾಗೂ ತುರ್ತು ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 27ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಸೆಪ್ಟೆಂಬರ್ 27ರಂದು ಬೆಳಗ್ಗೆ 10:00ರಿಂದ ಸಂಜೆ 6:00ರವರೆಗೆ ಕುಂಸಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಪ್ರದೇಶಗಳಲ್ಲಿ ವ್ಯತ್ಯಯ ಉಂಟಾಗಲಿದೆ. ಈ ವ್ಯಾಪ್ತಿಗೆ ಕುಂಸಿ, ಬಾಳೆಕೊಪ್ಪ, ಚೋರಡಿ, ತುಪ್ಪೂರು, ಕೋಣಿಹೂಸೂರು, ಹೊರಬೈಲು, ಶೆಟ್ಟಿಕೆರೆ, ರೇಚಿಕೊಪ್ಪ ಮತ್ತು ಸುತ್ತಮುತ್ತಲಿನ ಗ್ರಾಮಗಳು ಹಾಗೂ ಹಾರಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ ಮತ್ತು ಅವುಗಳ ಸುತ್ತಮುತ್ತಲಿನ ಗ್ರಾಮಗಳು ಸೇರಿವೆ.

ಅದೇ ದಿನ, ಅಂದರೆ ಸೆಪ್ಟೆಂಬರ್ 27ರಂದು, ಆಯನೂರು ಗ್ರಾಮದ ವಿದ್ಯುತ್ ವಿತರಣಾ ಕೇಂದ್ರದಲ್ಲೂ ಕಾಮಗಾರಿ ನಡೆಯುತ್ತಿರುವುದರಿಂದ ಬೆಳಗ್ಗೆ 10:00ರಿಂದ ಸಂಜೆ 6:00ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಈ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ಆಯನೂರು, ಮಂಡಘಟ್ಟ, ದೊಡ್ಡಮತ್ತಲಿ, ತಮ್ಮಡಿಹಳ್ಳಿ, ಮೈಸವಳ್ಳಿ, ಸೇವಾಲಾಲ್ ನಗರ, ವೀರಣ್ಣನಬೆನವಳ್ಳಿ, ಚನ್ನಹಳ್ಳಿ, ಇಟ್ಟಿಗೇಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ.

Share This Article