SHIVAMOGGA Feb 27, 2024 ಎಂ.ಆರ್.ಎಸ್. 220 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 110 ಕೆವಿ ಭದ್ರಾವತಿ ವಿವಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಮೆಸ್ಕಾಂ ಶಿವಮೊಗ್ಗ ಹಮ್ಮಿಕೊಂಡಿದೆ.
ಈ ಹಿನ್ನೆಲೆಯಲ್ಲಿ ಇದೇ ಫೆಬ್ರವರಿ 28 ರಂದು ಬೆಳಗ್ಗೆ 9.30 ರಿಂದ ಸಂ. 3.30ರವರೆಗೆ ಮಾಚೇನಹಳ್ಳಿ ವಿವಿ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಪ್ರದೇಶದಗಳಲ್ಲಿ ವಿದ್ಯುತ್ ಇರೋದಿಲ್ಲ ಎಂದು ಮೆಸ್ಕಾಂ ತಿಳಿಸಿದೆ.
ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್‍ಕಾಲೋನಿ ಮತ್ತು ಜಯಂತಿಗ್ರಾಮ, ಹೊನ್ನವಿಲೆ, ಮೇ||ರಾಮಮೂರ್ತಿ ಮಿನರಲ್ಸ್, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐ.ಟಿ.ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ.ಕಾಲೋನಿ, ನವುಲೆಬಸವಾಪುರ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀಭದ್ರಕಾಲೋನಿ, ಸದಾಶಿವಪುರ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ, ಹಾರೋಬೆನವಳ್ಳಿ, ತಾಂಡ, ಗೌಡನಾಯಕನಹಳ್ಳಿ, ಬಿ.ಬೀರನಹಳ್ಳಿ, ತರಗನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.