ಶಿವಮೊಗ್ಗದ ಈ ಪ್ರಮುಖ ಪ್ರದೇಶಗಳಲ್ಲಿ ಇವತ್ತು ಪವರ್ ಕಟ್/ ಗೃಹರಕ್ಷಕ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಸುದ್ದಿ!

ಹಂಚಿಕೊಳ್ಳಿ
WhatsApp Facebook X Telegram
ಶಿವಮೊಗ್ಗದ ಈ ಪ್ರಮುಖ ಪ್ರದೇಶಗಳಲ್ಲಿ  ಇವತ್ತು ಪವರ್ ಕಟ್/  ಗೃಹರಕ್ಷಕ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಸುದ್ದಿ!

SHIVAMOGGA  |  Dec 27, 2023  |     ಡಿ.27 ರಂದು ವಿದ್ಯುತ್ ವ್ಯತ್ಯಯ

ಪವರ್ ಕಟ್

ಶಿವಮೊಗ್ಗ 11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ  ಡಿ. 27 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ಪವರ್ ಕಟ್ ಜಾರಿಯಲ್ಲಿ ಇರಲಿದೆ ಎಂದು ಮೆಸ್ಕಾಂ ಪ್ರಕಟಿಸಿದೆ. 

ಬೊಮ್ಮನಕಟ್ಟೆ ಎ ಇಂದ ಎಫ್ ಬ್ಲಾಕ್‍ವರೆಗೆ, ಹಳೆ ಬೊಮ್ಮನಕಟ್ಟೆ,, ದೇವಂಗಿ 2ನೇ ಹಂತದ ಬಡಾವಣೆ, ಮಹಾರಾಣಿ ಸ್ಕೂಲ್ ಹತ್ತಿರ ನಿಗಡೆ ಲೇಔಟ್  ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

———————

ಡಿ.28 ರಂದು ಗೃಹರಕ್ಷಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ

ಶಿವಮೊಗ್ಗ ಜಿಲ್ಲೆಯ ವಿವಿಧ ಗೃಹರಕ್ಷಕ ದಳದ ಘಟಕಗಳಲ್ಲಿ ಸೇವೆ ಸಲ್ಲಿಸಲು ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಗೃಹರಕ್ಷಕ ಸದಸ್ಯರನ್ನಾಗಿ ನೋಂದಾಯಿಸುವ ಆಯ್ಕೆ ಪ್ರಕ್ರಿಯೆಯು ಡಿ.28 ರಂದು ಬೆಳಗ್ಗೆ 09.30 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ನಗರದ ಡಿ.ಎ.ಆರ್ ಕವಾಯತ್ತು ಮೈದಾನದಲ್ಲಿ ನಡೆಯಲಿದೆ.

     ಜಿಲ್ಲಾ ರಕ್ಷಣಾಧಿಕಾರಿ, ಅಪಾರ ಜಿಲ್ಲಾಧಿಕಾರಿ ಹಾಗೂ ಡಿ.ಡಿ.ಪಿ.ಐ ಮತ್ತು ಸಮಾದೇಷ್ಟರ ಸಮ್ಮುಖದಲ್ಲಿ ಸಂದರ್ಶನ ನಡೆಯಲಿದ್ದು, ಅಭ್ಯರ್ಥಿಗಳು ಆ ದಿನ ಮೂಲ ದಾಖಲೆಯೊಂದಿಗೆ ಹಾಜರಾಗಲು ಸೂಚಿಸಿದೆ.  ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಗೃಹರಕ್ಷಕದಳ ಕಚೇರಿ ದೂ.ಸಂ.08182-222630ನ್ನು ಸಂಪರ್ಕಿಸುವಂತೆ ಜಿಲ್ಲಾ ಗೃಹರಕ್ಷಕದಳದ ಗೌರವ ಸಮಾದೇಷ್ಟರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

————————————

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor