ನಾಳೆ ಶಿವಮೊಗ್ಗದ ಈ ಪ್ರಮುಖ ಪ್ರದೇಶಗಳಲ್ಲಿ ಪವರ್ ಕಟ್! ಕಾರಣವೇನು? ಎಲ್ಲೆಲ್ಲಿ Power Cut ? ವಿವರ ಇಲ್ಲಿದೆ

SHIVAMOGGA |  Dec 21, 2023  | ಶಿವಮೊಗ್ಗ ತಾಲ್ಲೂಕು, ಸಂತೇಕಡೂರು ಗ್ರಾಮದಲ್ಲಿ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಎಫ್-1 ಉಂಬ್ಳೇಬೈಲು, ಎಫ್-2 ಲಕ್ಕಿನಕೊಪ್ಪ, ಎಫ್-3 ಮತ್ತೂರು ಕುಡಿಯುವ ನೀರು, ಎಫ್-4 ಸಂತೇಕಡೂರು ಮಾರ್ಗಗಳಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಡಿ.22 ರಂದು ಬೆಳಗ್ಗೆ 09 ರಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

READ : Arecanut Rate? Dec 21, 2023 ಇವತ್ತು ಅಡಿಕೆ ದರ ಎಷ್ಟಿದೆ

ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.


Leave a Comment