ಗಾಂಧಿ ಬಜಾರ್, ಕೆ.ಆರ್​.ಪುರಂ, ಬಿ.ಹೆಚ್​.ರಸ್ತೆ, ನಾಗಪ್ಪ ಕೇರಿ ಸೇರಿದಂತೆ ಹಲವೆಡೆ ಪವರ್ ಕಟ್!

ಹಂಚಿಕೊಳ್ಳಿ
WhatsApp Facebook X Telegram
ಗಾಂಧಿ ಬಜಾರ್, ಕೆ.ಆರ್​.ಪುರಂ, ಬಿ.ಹೆಚ್​.ರಸ್ತೆ, ನಾಗಪ್ಪ ಕೇರಿ ಸೇರಿದಂತೆ ಹಲವೆಡೆ ಪವರ್ ಕಟ್!

Shivamogga Feb 20, 2024  ಶಿವಮೊಗ್ಗದಲ್ಲಿ ಇದೇ ಫೆಬ್ರವರಿ 22 ರಂದು ಹಳೆ ಶಿವಮೊಗ್ಗದಲ್ಲಿ ಕರೆಂಟ್ ಇರುವುದಿಲ್ಲ ಎಂದು ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. 

ಮೆಸ್ಕಾಂ ಪ್ರಕಟಣೆ

ಶಿವಮೊಗ್ಗ; ಫೆಬ್ರವರಿ 20 (ಕರ್ನಾಟಕ ವಾರ್ತೆ): ಶಿವಮೊಗ್ಗ ನಗರ ಗಾಂಧಿಬಜಾರ್, ಭರಮಪ್ಪನಗರ, ಎಂ.ಕೆ.ಕೆ.ರಸ್ತೆಗಳಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿ ಹಮ್ಮಿಕೊಳ್ಳುವುದರಿಂದ ಫೆ. 22 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಗಾಂಧಿಬಜಾರ್, ಸೊಪ್ಪಿನ ಮಾರ್ಕೆಟ್, ಕೆ.ಆರ್.ಪುರಂ, ಭರಮಪ್ಪ ನಗರ, ಎಂ.ಕೆ.ಕೆ. ರಸ್ತೆ, ಬಿ.ಹೆಚ್.ರಸ್ತೆ, ನಾಗಪ್ಪ ಕೇರಿ, ತಿರುಪಳ್ಳಯ್ಯನಕೇರಿ, ಸಾವರ್ಕರ್ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಈ ಪ್ರದೇಶಗಳ ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

ಸಾಗರ; ಮೆಸ್ಕಾಂ ಜನ ಸಂಪರ್ಕ ಸಭೆ

ಶಿವಮೊಗ್ಗ, ಫೆಬ್ರವರಿ 19, (ಕರ್ನಾಟಕ ವಾರ್ತೆ): ಸಾಗರ ಮೆಸ್ಕಾಂ ನಗರ ಉಪವಿಭಾಗ ಕಛೇರಿಯಲ್ಲಿ ಫೆ. 23 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 1.00 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಮಾಹಿತಿಗಾಗಿ ದೂರವಾಣಿ ಸಂಖ್ಯೆ 9448289516 ನ್ನು ಸಂಪರ್ಕಿಸುವುದು.

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor