SHIVAMOGGA NEWS TODAY

ಶಿವಮೊಗ್ಗ: ಮಾ. 1 ರಂದು ನಗರದ ಈ ಪ್ರದೇಶಗಳಲ್ಲಿ ಕರೆಂಟ್​​ ಇರಲ್ಲ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ: ನಗರದ ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ಮಾರ್ಚ್ 01 ರಂದು ವಿವಿಧ ಬಡಾವಣೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಘಾನಾದಲ್ಲಿ ನಾಟಿ ಔಷಧಿ ಮಾರಲು ಹೋದ ಶಿವಮೊಗ್ಗದ 24 ಮಂದಿಗೆ ಆಘಾತ. ಏನಿದು ಘಟನೆ 

ಮಾರ್ಚ್ 01 ರಂದು ಬೆಳಗ್ಗೆ 9.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಕಾಮಗಾರಿ ನಡೆಯಲಿದ್ದು, ಈ ಅವಧಿಯಲ್ಲಿ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ 

Power Outage ಎಲ್ಲೆಲ್ಲಿ ಕರೆಂಟ್​  ಇರಲ್ಲ

ಕುವೆಂಪುನಗರದ ಸೂಡ ಸಿ ಮತ್ತು ಡಿ ಬ್ಲಾಕ್, ಶಿವಕುಮಾರಸ್ವಾಮಿ ಲೇಔಟ್, ಇನ್ಫ್ರಾ ಸಿಟಿ, ಮ್ಯಾಕ್ಸ್ ಲೇಔಟ್, ಎಂ.ಇ.ಎಸ್. ಲೇಔಟ್, ಹಾಗೂ ರೆಡ್ಡಿ ಲೇಔಟ್ ವ್ಯಾಪ್ತಿಯಲ್ಲಿ ಪವರ್ ಕಟ್ ಇರಲಿದೆ. ಸವಳಂಗ ರಸ್ತೆ, ರತ್ನಗಿರಿ ನಗರ ಹಾಗೂ ಹುಣಸೋಡು ಭಾಗದ ಜನರಿಗೂ ಈ ವ್ಯತ್ಯಯ ತಟ್ಟಲಿದೆ. 

ಕಲ್ಲಗಂಗೂರು ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಅದರ ಸುತ್ತಮುತ್ತಲಿನ ಗ್ರಾಮಗಳಲ್ಲಿಯೂ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ. ತುರ್ತು ದುರಸ್ತಿ ಕಾರ್ಯದ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ನಿಗದಿತ ಸಮಯದ ನಂತರ ಎಂದಿನಂತೆ ವಿದ್ಯುತ್ ಸರಬರಾಜು ಪುನರಾರಂಭವಾಗಲಿದೆ ಎಂದು ಮೆಸ್ಕಾಂ ಮಾಹಿತಿ ನೀಡಿದೆ.

Power Outage in Shimoga on March 1st

Power Outage  Power Cut Shivamogga Power Cut Power Cut Tomorrow Scheduled Power Cut Power Cut in Shivamogga Shimoga Power Cut Update
Power Outage

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.