ಶಿವಮೊಗ್ಗ ಸಿಟಿ ಸುದ್ದಿ : ಜೂನ್ 5 ಮತ್ತು 6 ರಂದು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತನ್ನ ಪ್ರಕಟಣೆಯನ್ನು ಶಿವಮೊಗ್ಗ ವಾರ್ತಾ ಇಲಾಖೆಯ ಮೂಲಕ ನೀಡಿದೆ. ವಿವರ ಹೀಗಿದೆ.
ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಮೆಸ್ಕಾಂ ವತಿಯಿಂದ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ಕಾಮಗಾರಿಗಳನ್ನು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಹಾಗೂ ಗ್ರಾಮಾಂತರ ಭಾಗದ ಹಲವೆಡೆ ಜೂನ್ 5 ಮತ್ತು 6 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಶಿವಮೊಗ್ಗ ಸಿಟಿ :ಜೂನ್ 5 ರಂದು ಅಲ್ಕೋಳ ವ್ಯಾಪ್ತಿಯಲ್ಲಿ ಕರೆಂಟ್ ಇರಲ್ಲ
ಅಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಫೀಡರ್ ಎ.ಎಫ್-12ರಲ್ಲಿ ತುರ್ತು ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರಣದಿಂದ ಜೂನ್ 5 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ರವರೆಗೆ ಅಲ್ಕೋಳ ಸುತ್ತಮುತ್ತ ಕರೆಂಟ್ ಇರಲ್ಲ.
ಎಸ್.ಎಲ್.ವಿ ಬಡಾವಣೆ, ಗಜಾನನ ಲೇಔಟ್, ಐಶ್ವರ್ಯ ಬಡಾವಣೆ, ಜೆ.ಹೆಚ್. ಪಟೇಲ್ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಮುನಿಯಪ್ಪ ಲೇಔಟ್, ಸಂಗೊಳ್ಳಿ ರಾಯಣ್ಣ ಬಡಾವಣೆ, ಆದರ್ಶ ನಗರ, ಸಹ್ಯಾದ್ರಿನಗರ, ಸೋಮಿನಕೊಪ್ಪ, ವಿಜಯಲಕ್ಷ್ಮೀ ಲೇಔಟ್, ಸೋಮನಾಥ ಬಡಾವಣೆ, ನಿಸರ್ಗ ಲೇಔಟ್, ಹೊಂಗಿರಣ ಬಡಾವಣೆ, ಸೋಮಿನಕೊಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಶಿವಮೊಗ್ಗ ಸಿಟಿ : ಜೂನ್ 6 ರಂದು ನಗರದ ಹಲವೆಡೆ ವಿದ್ಯುತ್ ಕಡಿತ
ನಗರದ 110/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರ ಎಮ್.ಆರ್.ಎಸ್. ವ್ಯಾಪ್ತಿಯಲ್ಲಿ ಮೊದಲನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಡೆಯಲಿದೆ. ಆದ್ದರಿಂದ ಜೂನ್ 6 ರ ಶನಿವಾರದಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಚಿಕ್ಕಲ್ಲು, ಗುರುಪುರ ಸೇರಿದಂತೆ ಹಲವೆಡೆ ಕರೆಂಟ್ ಇರಲ್ಲ ಎಂದು ಮೆಸ್ಕಾಂ ಹೇಳಿದೆ.
ಪುರಲೆ, ಸಿದ್ದೇಶ್ವರ ನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಮ್.ಆರ್.ಎಸ್. ವಾಟರ್ ಸಪ್ಲೈ, ಎಮ್.ಆರ್.ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್ ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಳ್ಳಲಿದೆ. ಅದೇ ರೀತಿ ಬಿ.ಹೆಚ್. ರಸ್ತೆ ಗಾಯತ್ರಿ ಕಲ್ಯಾಣ ಮಂಟಪದಿಂದ ಅಮೀರ್ ಅಹಮದ್ ವೃತ್ತದವರೆಗೆ, ನೆಹರು ರಸ್ತೆ, ದುರ್ಗಿಗುಡಿ ಮುಖ್ಯ ರಸ್ತೆ, ಪಾರ್ಕ್ ಬಡಾವಣೆ, ಸರ್.ಎಂ.ವಿ. ರಸ್ತೆ
ವೀರಭದ್ರೇಶ್ವರ ಚಿತ್ರ ಮಂದಿರದಿಂದ ಮಹಾವೀರ ವೃತ್ತದವರೆಗೆ, ಬಾಲರಾಜ್ ಅರಸ್ ರಸ್ತೆ ಮಹಾವೀರ ವೃತ್ತದಿಂದ ಗೋಪಿ ವೃತ್ತದವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಗಾಂಧಿ ಪಾರ್ಕ್, ಲೂರ್ದು ನಗರ, ಕಾನ್ವೆಂಟ್ ರಸ್ತೆ, ಬಾಪೂಜಿ ನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್. ಬಡಾವಣೆ, ಜೋಸೆಫ್ ನಗರ, ಟ್ಯಾಂಕ್ ಬಂಡ್ ರಸ್ತೆ, ಕುವೆಂಪು ರಂಗಮಂದಿರ ಮತ್ತು ಮಹಾನಗರ ಪಾಲಿಕೆ ಕಚೇರಿ ಸುತ್ತಮುತ್ತ, ಮೀನಾಕ್ಷಿ ಭವನ, ಶಂಕರ ಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಮೆಹದಿ ನಗರ, ಬಸವನಗುಡಿ ವಿನಾಯಕ ಪಾರ್ಕ್, ವಿನಾಯಕ ನಗರ, ಅಮೀರ್ ಅಹಮದ್ ಕಾಲೋನಿ, ಸೋಮಯ್ಯ ಬಡಾವಣೆ, ಬ್ಯಾಂಕ್ ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ. ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಜೂನ್ 6 ರಂದು ಗ್ರಾಮಾಂತರ ಭಾಗದಲ್ಲೂ ವಿದ್ಯುತ್ ಕಡಿತ
ಎಂ.ಆರ್.ಎಸ್ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣೆ ಕಾಮಗಾರಿ ಇರುವುದರಿಂದ ಜೂನ್ 6 ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಎಫ್-7 ಪಿಳ್ಳಂಗಿರಿ ಎನ್.ಜೆ.ವೈ ಮತ್ತು ಎಫ್-8 ಜಾವಳ್ಳಿ ಐ ಪಿ ಮಾರ್ಗಗಳಲ್ಲಿ ಬರುವ ಗ್ರಾಮಾಂತರ ಪ್ರದೇಶಗಳಲ್ಲೂ ವಿದ್ಯುತ್ ವ್ಯತ್ಯಯವಾಗಲಿದೆ.
ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೇನವಳ್ಳಿ, ಹಾರೋಬೇನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಕೋರಿದೆ.
ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw
