ಡಿ.11 ರಂದು ಶಿವಮೊಗ್ಗದಲ್ಲಿ ವಿದ್ಯುತ್ ವ್ಯತ್ಯಯ | ಹೊಸನಗರದಲ್ಲಿ ಜನಸಂಪರ್ಕ ಸಭೆ

Power outage in Shivamogga on December 11 | Public relations meeting in Hosanagara

ಡಿ.11 ರಂದು ಶಿವಮೊಗ್ಗದಲ್ಲಿ ವಿದ್ಯುತ್ ವ್ಯತ್ಯಯ | ಹೊಸನಗರದಲ್ಲಿ ಜನಸಂಪರ್ಕ ಸಭೆ

SHIVAMOGGA |  Dec 9, 2023 | ಶಿವಮೊಗ್ಗ ಮಾಚೇನಹಳ್ಳಿ 110/11 ಕೆವಿ ವಿವಿ ಕೇಂದ್ರದ ಎಫ್-1 ಮತ್ತು ಎಫ್-18ರ ಮಾರ್ಗಗಳಲ್ಲಿ ತುರ್ತು ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಡಿ.11 ರಂದು ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಹೊನ್ನವಿಲೆ, ನವುಲೆ ಬಸಾಪುರ, ಗುಡ್ರಕೊಪ್ಪ, ಅಮರಾವತಿ ಕ್ಯಾಂಪ್, ಶೆಟ್ಟಿಹಳ್ಳಿ, ಹಳೇಶೆಟ್ಟಿಹಳ್ಳಿ, ಮತ್ತಿಘಟ್ಟ, ಹಾತಿಕಟ್ಟೆ, ಮಾಳೇನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

READ : ಎಷ್ಟಿದೆ ಅಡಿಕೆ ದರ! ಯಾವ ಮಾರುಕಟ್ಟೆಯಲ್ಲಿ ಹೆಚ್ಚಿದೆ ರೇಟು! ಅಡಿಕೆ ಧಾರಣೆಯ ವಿವರ ಇಲ್ಲಿದೆ

ಹೊಸನಗರ; ಮೆಸ್ಕಾಂ ಜನ ಸಂಪರ್ಕ ಸಭೆ

ಹೊಸನಗರ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಡಿ. 12 ರಂದು  ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 1.00 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ. 

ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ: 944828951

ಪಿಯು ಉಪನ್ಯಾಸಕರ ಹುದ್ದೆಗೆ ಬಡ್ತಿ ಪ್ರೌಢಶಾಲಾ ಸಹ ಶಿಕ್ಷಕರಿಗೆ ತಾರತಮ್ಯ ನಿವಾರಣೆಗೆ ಕ್ರಮ: ಸಚಿವ ಮಧು ಬಂಗಾರಪ್ಪ

 ರಾಜ್ಯದಲ್ಲಿ ಪ್ರೌಢಶಾಲಾ ಸಹ ಶಿಕ್ಷಕರಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡಲು ರೂಪಿಸಿರುವ ನಿಯಮಗಳಲ್ಲಿನ ತಾರತಮ್ಯಗಳ ಬಗ್ಗೆ ಬೆಳಗಾವಿಯ  ಚಳಿಗಾಲದ ಅಧಿವೇಶನ ಮುಗಿಯುವ ಒಳಗೆ ವಿಶೇಷ ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲು ಪ್ರಯತ್ನಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದರು.

ಅವರು ಇಂದು ವಿಧಾನಪರಿಷತ್‌ನಲ್ಲಿ  ಸದಸ್ಯ  ಮರಿತಿಬ್ಬೇಗೌಡ ಅವರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವ್ಯಾಪ್ತಿಯಲ್ಲಿನ ಶಿಕ್ಷಕರಿಗೆ ಹಿರಿಯ ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆಗೆ ಬಡ್ತಿ ನೀಡುವಲ್ಲಿ ಒಂದು ನಿಯಮ, ಪ್ರೌಢಶಾಲೆಯಿಂದ ಪದವಿ ಪೂರ್ವ ಕಾಲೇಜಿಗೆ ಬಡ್ತಿ ನೀಡುವಲ್ಲಿ ಮತ್ತೊಂದು ನಿಯಮ ರೂಪಿಸಿ ತಾರತಮ್ಯ ಉಂಟು ಮಾಡಿರುವ ಗಂಭೀರ ಸಮಸ್ಯೆ ಕುರಿತ ಗಮನ ಸೆಳಯುವ ಸೂಚನೆಗೆ  ಉತ್ತರಿಸಿ ಮಾತನಾಡಿದರು.

READ : ಸಿಎಂ ಸಿದ್ದರಾಮಯ್ಯರ ವಿರುದ್ಧ ತನಿಖೆಗೆ ಆಗ್ರಹಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ

ಪ್ರಸ್ತುತ ಪ್ರೌಢಶಾಲಾ ಸಹ ಶಿಕ್ಷಕರಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ಹೊಂದಲು ಪ್ರೌಢಶಾಲಾ ಸಹ ಶಿಕ್ಷಕರಾಗಿ 10 ವರ್ಷಗಳ ಅರ್ಹತಾದಾಯಕ ಸೇವೆಯನ್ನು ಪೂರೈಸಿರಬೇಕು, ಒಂದು ವೇಳೆ 10 ವರ್ಷ ಪೂರೈಸಿರುವವರು ಲಭ್ಯವಿಲ್ಲದಿದ್ದಲ್ಲಿ 7 ವರ್ಷ  ಸೇವೆ ಪೂರೈಸಿರುವವರನ್ನು ಬಡ್ತಿಗೆ ಪರಿಗಣಿಸಲಾಗುವುದು. 

ಪ್ರಸ್ತುತ ಚಾಲ್ತಿಯಲ್ಲಿರುವ 2014 ರ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ಉಪನ್ಯಾಸಕ ವೃಂದದಲ್ಲಿ ನೇರ ನೇಮಕಾತಿಗೆ ಶೇ.74 ಮತ್ತು ಶೇ.1 ರಷ್ಟು ಸೇವಾ ನಿರತ ಸಿ ಗುಂಪಿನ ನೌಕರರಿಗೆ ಹಾಗೂ ಶೆ.25 ರಷ್ಟು ಸೇವಾ ನಿರತ ಪ್ರೌಢಶಾಲಾ ಸಹ ಶಿಕ್ಷಕರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ಅರ್ಹತಾದಾಯಕ ಪರೀಕ್ಷೆ ಉತ್ತೀರ್ಣರಾಗುವ ಷರತ್ತಿನಂತೆ ಅನುಪಾತವನ್ನು ಹಂಚಿಕೆ ಮಾಡಿ ಬಡ್ತಿ ಕಲ್ಪಿಸಲಾಗಿದೆ ಎಂದರು.

2014 ರ ವೃಂದ ಮತ್ತು ನೇಮಕಾತಿ ನಿಯಮಗಳು ಹಾಗೂ ಅರ್ಹತದಾಯಕ ಪರೀಕ್ಷೆ ಉತೀರ್ಣರಾಗಬೇಕು ಎಂಬ  ಷರತ್ತುಗಳ ಕಾರಣ ಕಳೆದ 9 ವರ್ಷಗಳಿಂದ  ಯಾವುದೇ ಪ್ರೌಢಶಾಲಾ ಸಹ ಶಿಕ್ಷಕರು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ಹೊಂದಲು ಸಾಧ್ಯವಾಗಿಲ್ಲ. ಪ್ರಾಥಮಿಕ ಶಾಲಾ ಶಿಕ್ಷಕರಿಂದ ಪ್ರೌಢಶಾಲಾ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವಾಗ ಶೇ.50ರಷ್ಟು ನೇರ ನೇಮಕಾತಿ ಮತ್ತು ಶೇ.50ರಷ್ಟು ಸೇವಾ ನಿರತರಿಗೆ ನಿಗಧಿಪಡಿಸಿದ್ದು, ಯಾವುದೇ  ಅರ್ಹತಾ ಪರೀಕ್ಷೆಯನ್ನು ಕಡ್ಡಾಯಗೊಳಿಸಿಲ್ಲ. ಒಂದೇ ಇಲಾಖೆಯಲ್ಲಿ  ಬಡ್ತಿಗಾಗಿ ಈ ರೀತಿಯಾಗಿ ತಾರತಮ್ಯ ಇರುವುದರಿಂದ ಇದನ್ನು ಸರಿಪಡಿಸುವಂತೆ ಶಾಸಕ ಮರಿತಿಬ್ಬೇಗೌಡ ಅವರಿಗೆ ಪೂರಕವಾಗಿ ಸದಸ್ಯರಾದ ನಾರಾಯಣ ಸ್ವಾಮಿ,ಶಶೀಲ್ ನಮೋಶಿ, ಭೋಜೇಗೌಡ, ಸಂಕನೂರ್ ಹಾಗೂ ತೇಜಸ್ವಿನಿ ಗೌಡ ಮಾತನಾಡಿದರು.

ಈ ಸಮಸ್ಯೆಯ ಕುರಿತಂತೆ ಶಿಕ್ಷಕರೂ ಕೂಡಾ ತಮ್ಮ ಗಮನಕ್ಕೆ ತಂದಿದ್ದು, ಈ ಬಗ್ಗೆ ಪ್ರಸಕ್ತ ಅಧಿವೇಶನ ಮುಗಿಯುವ ಒಳಗೆ, ಅಗತ್ಯ ಬದಲಾವಣೆಗಳ ಬಗ್ಗೆ ವಿಶೇಷ ಸಭೆ ಕರೆದು ಚರ್ಚಿಸಲಾಗುವುದು ಎಂದು ಸಚಿವರು ತಿಳಿಸಿದರು.