ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ:ಶಿವಮೊಗ್ಗ ನಗರ ಉಪವಿಭಾಗ-1ರ ವ್ಯಾಪ್ತಿಯ ಮಂಡ್ಲಿ ಭಾಗದಲ್ಲಿ ತುರ್ತು ನಿರ್ವಹಣೆ ಹಾಗೂ ಇತರೆ ಕಾಮಗಾರಿ ಹಮ್ಮಿಕೊಂಡಿದ್ದು, ನ.02 ರಂದು ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ
ಇಲಿಯಾಜ್ ನಗರ 6 ರಿಂದ 9ನೇ ಕ್ರಾಸ್ ವರೆಗೆ, ಇಲಿಯಾಜ್ ನಗರ, ಮಂಡಕ್ಕಿಭಟ್ಟಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
