Prajwal revanna : ಅತ್ಯಾಚಾರ ಪ್ರಕರಣ : ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ಪ್ರಕಟ
ಮೈಸೂರಿನ ಕೆ ಆರ್ ನಗರದ ಮಹಿಳೆ ಅತ್ಯಾಚಾರ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾಜಿ ಸಂಸದ ಪ್ರಜ್ವಲ್ ರೇವಣ್ಣರನ್ನು ದೋಷಿ ಎಂದು ತೀರ್ಪು ನೀಡಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಶ್ ಗಜಾನನ ಭಟ್ ಕೇವಲ7 ತಿಂಗಳಲ್ಲಿ ತೀರ್ಪು ಪ್ರಕಟಿಸಿದ್ದು, ತೀರ್ಪು ಪ್ರಕಟಿಸುವ ವೇಳೆ ಪ್ರಜ್ವಲ್ ರೇವಣ್ಣ ಸಹ ಕೋರ್ಟ್ನಲ್ಲಿ ಹಾಜರಿದ್ದರು. ತೀರ್ಪು ಪ್ರಕಟವಾಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಕಣ್ಣೀರು ಹಾಕಿದ್ದಾರೆ.
ಪ್ರಜ್ವಲ್ ರೇವಣ್ಣ ಈ ಪ್ರಕರಣದಲ್ಲಿ ದೋಷಿ ಎಂದು ಸಾಭಿತಾದರೆ ಕನಿಷ್ಟ 10 ವರ್ಷ ಗರಿಷ್ಟ ಜೀವಾವಧಿ ಶಿಕ್ಷ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಳೆ ಶಿಕ್ಷೆಯ ಅವಧಿಯನ್ನು ಪ್ರಕಟಿಸಲಿದೆ. ಈ ಕುರಿತಾಗಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಶಿಕ್ಷೆ ಕಡಿಮೆ ಮಾಡುವಂತೆ ಅಥವ ತೀರ್ಪನ್ನು ರದ್ದು ಮಾಡುವಂತೆ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸುವ ಅವಕಾಶವಿದೆ.
