pratap simha : ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತವಾರಿ ಎಸ್ ಮಧು ಬಂಗಾರಪ್ಪ ವಿರುದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಅವಹೇಳನಕಾರಿ ಹೇಳಿಕೆ ನೀಡಿದ್ದು, ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಿ ಎಂದು ಆಗ್ರಹಿಸಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಇಂದು ಶಿವಮೊಗ್ಗದ ಪ್ರಧಾನ ಅಂಚೆ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.
pratap simha: ಪ್ರತಿಭಟನೆಗೆ ಕಾರಣವೇನು
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಈ ಹಿಂದೆ ಅವಿದ್ಯಾವಂತ ರಾಜಕಾರಣಿ ಎಂದು ಹೇಳಿಕೆ ನೀಡಿದ್ದರು. ಆ ಹಿನ್ನಲೆ ಇಂದು ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಪ್ರತಾಪ್ ಸಿಂಹ ಮುಖವಾಡ ಧರಿಸಿದ ವ್ಯಕ್ತಿಗೆ ಹುಚ್ಚಾ ಹುಚ್ಚಾ ಎಂದು ವ್ಯಂಗ್ಯ ಮಾಡುವುದು ಸೇರಿದಂತೆ ಪ್ರತಾಪ್ ಸಿಂಹರ ಮುಖವಾಡ ಧರಿಸಿದ ವ್ಯಕ್ತಿಗೆ ಆಂಬ್ಯುಲೆನ್ಸ್ ನಲ್ಲಿ ಕಳಿಸುವ ಮೂಲಕ ವಿಭಿನ್ನ ರೀತಿಯ ಪ್ರತಿಭಟನೆಯನ್ನು ನಡೆಸಲಾಯಿತು.

ಹಾಗೆಯೇ ಕಾಂಗ್ರೆಸ್ ಕಾರ್ಯಕರ್ತರು ಪ್ರತಾಪ ಸಿಂಹರಿಗೆ ಹುಚ್ಚು ಹಿಡಿದಿದ್ದು, ಅವರಿಗೆ ಸರಿಯಾದ ಚಿಕಿತ್ಸೆ ಕೊಡಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ ರಾಷ್ಟ್ರೀಯ ಅಧ್ಯಕ್ಷರಾದ ಜಿಪಿ ನಡ್ಡಾರವರಿಗೆ ಪತ್ರ ಬರೆಯುವ ಮೂಲಕ ಆಗ್ರಹಿದರು.
ಪ್ರತಾಪ್ ಸಿಂಹ ಪಕಕರ್ತರಾಗಿ ಕೆಲಸ ಮಾಡಿದವರು. ಈ ದೇಶದ ಸತ್ಯವಿಧಾನ, ವ್ಯವಸ್ಥೆಯ ಬಗ್ಗೆ ಸಾಕಷ್ಟು ತಿಳಿದುಕೊಂಡಿರಬೇಕಿತ್ತು. ಆದರೆ ಜನರಿಂದ ಆಯ್ಕೆಯಾಗಿ ರಾಜ್ಯದ ಶಿಕ್ಷಣ ಸಚಿವರಾಗಿ ದಕ್ಷತೆಯಿಂದ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುತ್ತಿರುವ ಮಧು ಬಂಗಾರಪ್ಪ ಅವರನ್ನು ಆನ್ಪಡ್ ಎಂದು ಹೇಳುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಅಣಕಿಸುವ ಕೆಲಸ ಮಾಡಿದ್ದಾರೆ. ಇಂತಹ ಸಾರ್ವಜನಿಕ ಕ್ಷೇತ್ರದಲ್ಲಿ ಇರುವುದಕ್ಕೆ ಪ್ರತಾಪ್ ಸಿಂಹ ಅರ್ಹರಲ್ಲ. ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತನಾಗಿ ರಾಜಕೀಯವಾಗಿ ನಿರಾಶ್ರಿತನಂತಾಗಿರುವ ಪ್ರತಾಪಸಿಂಹನಿಗೆ ಹುಚ್ಚು ಹಿಡಿರುವುದು ಖಚಿತವಾಗಿದೆ. ಹಾಗಾಗಿ ಕಂಡಕಂಡವರನ್ನು ಬೇಕಾಬಿಟ್ಟಿ ಟೀಕಿಸುವುದು ಮಾಡುತ್ತಿದ್ದಾರೆ. ಪ್ರತಾಪ ಸಿಂಹ ಸಂಸದನಾಗಿ ಮೈಸೂರು-ಕೊಡಗಿನಲ್ಲಿ ಯಾವ ಅಭಿವೃದ್ಧಿ ಮಾಡಿದ್ದಾರೆ, ಕೇವಲ ಟೀಕೆಗಳನ್ನು ಮಾಡುತ್ತಾ, ಪಕ್ಷದ ವರಿಷ್ಠರನ್ನು ಓಲೈಸುತ್ತಾದ್ದರು, ಇಂದು ಬಿಜೆಪಿ ಪಕ್ಷದವರೇ ಅವರನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇದರಿಂದ ಪ್ರತಾಪಸಿಂಹ ತನ್ನ ಅಸ್ತಿತ್ವಕ್ಕಾಗಿ ಬೇಕಾಬಿಟ್ಟಿ ನಾಲಿಗೆ ಹರಿಬಿಡುತ್ತಿದ್ದಾರೆ ಎಂದು ಆರೋಪಿಸಿದರು.
prathap simha : ಈ ದೇಶದ ಸಂವಿಧಾನದಲ್ಲಿರುವ ಅವಕಾಶದಿಂದಾಗಿಯೇ ಇಂದು ಮಧು ಬಂಗಾರಪ್ಪನವರು ಶಾಸಕರಾಗಿ, ಶಿಕ್ಷಣ ಸಚಿವರಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಶಿಕ್ಷಣ ಸಚಿವರಾದ ಮೇಲೆ ಎಸ್ಎಸ್ಎಲ್ಸಿ ಮತ್ತು ಪಿಯುಸಿಯ ಫಲಿತಾಂಶದಲ್ಲಿ ಆಗಿರುವ ಗಣನೀಯ ಹೆಚ್ಚಳವೇ ಅವರ ಕಾರ್ಯವೈಖರಿಗೆ ಹಿಡಿದ ಕನ್ನಡಿಯಾಗಿದೆ. ಆದರೆ ಪ್ರತಾಪಸಿಂಹ ಅಧಿಕಾರದಲ್ಲಿದ್ದಾಗ ಮಾಡಿಕೊಂಡಂತಹ ಅವಾಂತರಗಳು ಏನೇನು ಎನ್ನುವುದು ಇಡೀ ಜಗತ್ತಿಗೆ ಗೊತ್ತಿದೆ. ರಾಜಕೀಯವಾಗಿ ನಿರಾಶ್ರಿತನಾಗಿ ಹುಚ್ಚುಚ್ಚಾಗಿ ಹೇಳಿಕೆ ನೀಡುತ್ತಿರುವ ಪ್ರತಾಪಸಿಂಹ ಕೂಡಲೇ ಮಧು ಬಂಗಾರಪ್ಪ ಮತ್ತು ಈ ನಾಡಿನ ಜನತೆಯ ಬಳಿ ಕ್ಷಮೆ ಯಾಚಿಸಬೇಕು.ಬಿಜೆಪಿ ವರಿಷ್ಟರು ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸಬೇಕು. ಇಲ್ಲವಾದರೆ ಅವರ ಹುಚ್ಚು ಹೇಳಿಕೆಗಳಿಂದ ಜನತೆ ಬಿಜೆಪಿ ವರಿಷ್ಠರ ಮೇಲೆ ಮುಗಿಬೀಳುವ ಸಾಧ್ಯತೆ ಇದೆ ಎಂದರು.